Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ನ್ಯಾಯಾಲಯದಿಂದ ನಿರ್ಬಂಧ ಆದೇಶ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ನ್ಯಾಯಾಲಯದಿಂದ ನಿರ್ಬಂಧ ಆದೇಶ

    March 26, 2025
    Share

    ಬೆಂಗಳೂರು : ಧರ್ಮಸ್ಥಳ ಕ್ಷೇತ್ರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನ-ಅಪಪ್ರಚಾರ ಮಾಡುವವರ ವಿರುದ್ಧ ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯವು ಜಾನ್ ಡೋ (ಅಶೋಕ ಕುಮಾರ್) ಆದೇಶ ನೀಡಿದೆ. ಒಎಸ್ 2145/2025 ಪ್ರಕರಣದಲ್ಲಿ ನ್ಯಾಯಾಲಯ ಆದೇಶ ನೀಡಿದೆ. ಈ ಆದೇಶದನ್ವಯ ಯಾರೇ ಆಗಲಿ ಧರ್ಮಸ್ಥಳ ಕ್ಷೇತ್ರ, ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಾಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ ಹರಡಲು ಆವಕಾಶವಿರುವುದಿಲ್ಲ.

    ಏನಿದು ಜಾನ್ ಡೋ (ಅಶೋಕ ಕುಮಾರ್) ಆದೇಶ? ‘ಜಾನ್ ಡೋ’ ಆದೇಶ ಅಂದರೆ ಯಾವುದೇ ಅಪರಿಚಿತನ ವಿರುದ್ಧ ಹೊರಡಿಸುವ ನಿರ್ಬಂಧ ಆದೇಶ. ಒಬ್ಬ ವ್ಯಕ್ತಿ ಅಥವಾ ಸಂಸ್ಥೆಗೆ ಅಪರಿಚಿತ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡುವ ಆದೇಶವಿದು. ಯಾರ ವಿರುದ್ಧ ಕ್ರಮಕ್ಕೆ ಮನವಿ ಮಾಡಲಾಗಿದೆಯೋ ಆ ವ್ಯಕ್ತಿ ಅಥವಾ ಸಂಸ್ಥೆಯ ಗುರುತು ಗೊತ್ತಿಲ್ಲದಿದ್ದಾಗ ಈ ‘ಜಾನ್ ಡೋ’ ಆದೇಶ ಅಥವಾ ನಿರ್ಬಂಧ ಹೊರಡಿಸಲಾಗುತ್ತದೆ. ಸಾಮಾನ್ಯವಾಗಿ ಆನ್‌ಲೈನ್‌ನಲ್ಲಿ ಗುರುತು ಮುಚ್ಚಿಟ್ಟು ಯಾವುದಾದರೂ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಬರೆಯುವವರ ವಿರುದ್ಧ ಈ ಆದೇಶ ಹೊರಡಿಸಲಾಗುತ್ತದೆ. ಭಾರತದಲ್ಲಿ ಇದಕ್ಕೆ ‘ಅಶೋಕ್ ಕುಮಾರ್’ ನಿರ್ಬಂಧ ಎಂದು ಹೇಳಲಾಗುತ್ತದೆ.

    ಈ ಆದೇಶದ ಪ್ರಕಾರ ಧರ್ಮಸ್ಥಳ ಕ್ಷೇತ್ರ, ಕ್ಷೇತ್ರಕ್ಕೆ ಸಂಬಂಧಿತ ಸಂಸ್ಥೆಗಳು ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಅಪಪ್ರಚಾರ ಮಾಡುವುದು, ಅಂತಹ ವಿಚಾರಗಳನ್ನು ಹಂಚಿಕೊಳ್ಳುವುದು ಅಥವಾ ಹರಡುವುದಕ್ಕೆ ನಿಷೇಧ ಇರುತ್ತದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ. ಈ ಪ್ರಕರಣದಲ್ಲಿ ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ಶ್ರೀ ಕ್ಷೇತ್ರ ಧರ್ಮಸ್ಥಳ ಪರ ವಾದಿಸಿದ್ದರು.

    Post Views: 275

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.