ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ದೂರದಾರ ಚಿನ್ನಯ್ಯನ ಹೇಳಿಕೆ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಬುರುಡೆ ಗ್ಯಾಂಗ್ ಗಿರೀಶ್ ಮಟ್ಟಣ್ಣನವರ್ , ಮಹೇಶ್ ತಿಮರೋಡಿ, ಜಯಂತ್ ಹಾಗೂ ವಿಠಲ ಗೌಡ ಹೈಕೋರ್ಟ್ ಮೆಟ್ಟಿಲೇರಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣ ಸಂಬಂಧ ತಮ್ಮ ವಿರುದ್ದ ದಾಖಲಾಗಿರುವ ಎಫ್ ಐಆರ್, ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಹಾಗೂ ವಿಠಲಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ರುವಾರ ವಿಚಾರಣೆಗೆ ನಿಗದಿಯಾಗಿದೆ.
ಪ್ರತಿಭಟನೆಗೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದ ಪ್ರಕರಣದಲ್ಲಿ ಬುರುಡೆ ತಂದು ಆರೋಪಗಳ ಸುರಿಮಳೆಗೈದಿದ್ದ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದರಿಂದ ಇಡೀ ಬುರುಡೆ ಗ್ಯಾಂಗ್ ಸಂಕಷ್ಟಕ್ಕೆ ಸಿಲುಕಿದೆ ಎನ್ನಲಾಗಿದೆ.
ಧರ್ಮಸ್ಥಳ ಪ್ರಕರಣದ ಕುರಿತು ಎಸ್ ಐಟಿ ತನಿಖೆ ಮುಂದುವರಿದ ನಡುವೆಯೇ ಬುರುಡೆ ಗ್ಯಾಂಗ್ ನ ಒಂದೊಂದೇ ಮುಖವಾಡ ಕಳಚಿಬೀಳುವ ಮೂಲಕ ಸಾರ್ವಜನಿಕವಾಗಿ ಮುಖಭಂಗಕ್ಕೀಡಾಗಿದ್ದು, ಇದೀಗ ತಾವೇ ತೋಡಿದ ಗುಂಡಿಗೆ ಬಿದ್ದಿದ್ದು, ಅದರಿಂದ ಪಾರಾಗಲು ಪ್ರಕರಣವನ್ನೇ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದಂತಾಗಿದೆ.




