Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಿಗಂತ್ ಮನೆಗೆ ಹೋಗಲು ಒಪ್ಪುತಿಲ್ಲ : ಹೈಕೋರ್ಟ್ ಗೆ ವರದಿ ಸಲ್ಲಿಸಿದ ಪೊಲೀಸರು
    ಇತ್ತೀಚಿನ ಸುದ್ದಿ

    ದಿಗಂತ್ ಮನೆಗೆ ಹೋಗಲು ಒಪ್ಪುತಿಲ್ಲ : ಹೈಕೋರ್ಟ್ ಗೆ ವರದಿ ಸಲ್ಲಿಸಿದ ಪೊಲೀಸರು

    March 13, 2025
    Share

    ಮಂಗಳೂರು : ಬಂಟ್ವಾಳದ ಫರಂಗಿಪೇಟೆ ನಿವಾಸಿ ದಿಗಂತ್ ನಾಪತ್ತೆಯಾದ ವೇಳೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಹೆಬಿಯಸ್ ಕಾರ್ಪಸ್ ಹಿನ್ನಲೆ ಇಂದು ದಿಂಗತ್ ಪತ್ತೆಯಾದ ಬಗ್ಗೆ ಹೈಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಪೊಲೀಸರು ಅಫಿಡವಿಟ್ ಸಲ್ಲಿಸಿದ್ದಾರೆ. ಈ ಅಫಿಡವಿಟ್ ನಲ್ಲಿ ದಿಗಂತ್ ಮನೆಗೆ ಹೋಗಲು ನಿರಾಕರಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು. ವಿಚಾರಣೆ ವೇಳೆ, ಪೊಲೀಸರ ಪರ ವಕೀಲರು “ದಿಗಂತ್ ಪೋಷಕರ ಬಳಿ ಹೋಗಲು ನಿರಾಕರಿಸುತ್ತಿರುವ ಬಗ್ಗೆ ಹೈಕೋರ್ಟ್ ಗೆ ತಿಳಿಸಿದರು.

    ಆದರೆ ದಿಗಂತ್ ಫೋಷಕರು ಇದೇ ವೇಳೆ ಮಗನನ್ನು ಕಳುಹಿಸಿ ಕೊಡುವಂತೆ ಹೈಕೋರ್ಟ್ಗೆ ಮನವಿ ಮಾಡಿಕೊಂಡರು. ದಿಗಂತ್ ಪೋಷಕರ ಪರ ವಕೀಲರು “ದಿಗಂತ್ ಪತ್ತೆಯಾದ ದಿನ ತಾಯಿ ಜೊತೆ ಫೋನ್ನಲ್ಲಿ ಮಾತನಾಡಿದ ವಿವರ ನ್ಯಾಯಪೀಠಕ್ಕೆ ತಿಳಿಸಿದರು. ನಾನಾಗಿಯೇ ಹೋಗಿಲ್ಲ, ನನ್ನನ್ನು ಯಾರೋ ಕರೆದು ಕೊಂಡು ಹೋಗಿದ್ದಾರೆ ಅಂತ ದಿಗಂತ್ ಎಂದಿದ್ದನ್ನು ಕೋರ್ಟ್ ಮುಂದೆ ಪ್ರಸ್ತಾಪಿಸಿದರು.

    ಆದರೆ, ದಿಗಂತ್ ಅವನಾಗಿಯೇ ಹೋಗಿರುವುದಾಗಿ ಹೇಳಿದ್ದಾನೆ. ಅವನು ಯಾವುದೇ ಅನಧಿಕೃತ ಬಂಧನಕ್ಕೆ ಒಳಗಾಗಿರಲಿಲ್ಲ. ಪರೀಕ್ಷೆ ಭಯದಿಂದ ತಾನಾಗಿಯೇ ಹೋಗಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾಗಿ ಪೊಲೀಸರ ವರದಿಯಲ್ಲಿದೆ.

    ಪಿಯುಸಿ ಪರೀಕ್ಷೆ ಇನ್ನೂ ಮುಗಿಯದ ಕಾರಣ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪೋಷಕರು ಇದೇ ವೇಳೆ ಮನವಿ ಮಾಡಿದರು. ಪರೀಕ್ಷೆ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳದಂತೆ ಸೂಚನೆ ನೀಡಿತು. ಅಲ್ಲದೇ, ಪರೀಕ್ಷೆ ವಿಚಾರದಲ್ಲಿ ವಿದ್ಯಾರ್ಥಿಗೆ ಯಾಕೆ ಒತ್ತಡ ಹೇರುತ್ತೀರಿ ಎಂದು ಪ್ರಶ್ನೆ ಮಾಡಿತು.

    ಈ ವೇಳೆ ದಿಂಗತ್ ಪೋಷಕರು ಮಗನ ಜೊತೆ ಮಾತನಾಡಲು ಅವಕಾಶ ಕೊಡುವಂತೆ ಹೈಕೋರ್ಟ್ ಮನವಿ ಮಾಡಿದರು. ಆದರೆ ಹೈಕೋರ್ಟ್ ದಿಗಂತ್ ವಿಚಾರದಲ್ಲಿ ಮಕ್ಕಳ ಕಲ್ಯಾಣ ಸಮಿತಿ ನಿರ್ಧಾರ ಕೈಗೊಳ್ಳಬೇಕೆಂದು ಸೂಚನೆ ನೀಡಿತು.

    ದಿಗಂತ್ ಸದ್ಯ ಬೊಂದೆಲ್ ಮಕ್ಕಳ ಕಲ್ಯಾಣ ಸಮಿತಿ ವಶದಲ್ಲಿದ್ದಾರೆ. ವಾದ-ಪ್ರತಿವಾದ ಆಲಿಸಿದ ಜಸ್ಟಿಸ್ ವಿ ಕಾಮೇಶ್ವರ್ ರಾವ್, ಜಸ್ಟಿಸ್ ಟಿ ಎಂ ನಡಾಫ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆಯನ್ನು ಮುಂದೂಡಿದೆ.

    Post Views: 272

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.