Facebook Twitter Instagram
    Thursday, October 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026
    Share

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಮೇಲೆ ಕತ್ತಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು ₹88 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ

    2020ರ ಅಕ್ಟೋಬರ್ 28ರಂದು ಸಂಜೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಈ ಘಟನೆ ನಡೆದಿತ್ತು. ಸ್ಟುಡಿಯೋ ಮಾಲೀಕ ದಿನೇಶ್ ಅವರು ಸ್ಟುಡಿಯೋದಲ್ಲಿದ್ದ ವೇಳೆ, ಪೂರ್ವದ್ವೇಷದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳು ಅಲ್ಲಿಗೆ ಬಂದು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ್ದರು.

    ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 103/2020ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 307, 324, 326, 504, 506 ಹಾಗೂ 34ರಂತೆ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖೆ ನಡೆಸಿದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಗಳಾದ ಮಹಮ್ಮದ್ ಸೈಫುದಿನ್, ಮಹಮ್ಮದ್ ಅರ್ಷಾದ್, ಅಬ್ದುಲ್ ರಹಿಮಾನ್ ಅಲಿಯಾಸ್ ಮುನ್ನಿ ಹಾಗೂ ಮಹಮ್ಮದ್ ಸವಾದ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು 2026ರ ಅಕ್ಟೋಬರ್ 28ರಂದು ನಾಲ್ವರು ಆರೋಪಿಗಳಿಗೂ ತಲಾ 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು ₹88 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಶ್ರೀಮತಿ ಜ್ಯೋತಿ ನಾಯಕ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

    Post Views: 1

    Related Posts

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026

    ಮಂಗಳೂರು: ಯುವಕ ಆತ್ಮಹತ್ಯೆ, ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ

    October 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.