Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಖ್ಯ ದ್ವಾರ : ವಕೀಲರುಗಳ ಸಹಿತ ಸಾರ್ವಜನಿಕರಿಗೆ ಪ್ರವೇಶ ಸ್ಥಗಿತ
    ಇತ್ತೀಚಿನ ಸುದ್ದಿ

    ಮಂಗಳೂರು: ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಖ್ಯ ದ್ವಾರ : ವಕೀಲರುಗಳ ಸಹಿತ ಸಾರ್ವಜನಿಕರಿಗೆ ಪ್ರವೇಶ ಸ್ಥಗಿತ

    October 16, 2022
    Share

    ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಖ್ಯ ಪ್ರವೇಶ ದ್ವಾರದಲ್ಲಿ ವಕೀಲರುಗಳು ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಧಿಸಿ ಕೇವಲ ನ್ಯಾಯಧೀಶರಿಗಷ್ಟೇ ಪ್ರವೇಶ ಎಂಬ ಹೊಸ ನಿಯಮ ಜಾರಿಗೊಂಡಿದೆ. ಪರಿಣಾಮ ವಕೀಲರುಗಳು, ಸಾರ್ವಜನಿಕ ವಲಯದಲ್ಲಿ ತೀವ್ರ ವ್ಯಕ್ತವಾಗಿದೆ.

    ಜಿಲ್ಲಾ ನ್ಯಾಯಾಲಯ ಕಟ್ಟಡವು ಸರಕಾರಿ ಕಾರ್ಯಕ್ಕಾಗಿ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಹೊಂದಿರುವ ಕಟ್ಟಡವಾಗಿದೆ‌. ಆದರೆ ನೂತನವಾಗಿ ಜಾರಿಯಾಗಿರುವ ನಿಯಮದಿಂದ ದ.ಕ.ಜಿಲ್ಲಾ ನ್ಯಾಯಧೀಶರು ಮಾತ್ರ ಮುಖ್ಯದ್ವಾರದಿಂದ ಪ್ರವೇಶಿಸಬಹುದು. ವಕೀಲರು ಸಹಿತ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಧಿಸಿರುವುದು ತೀವ್ರ ಅಸಮಾಧಾನವನ್ನು ಹುಟ್ಟು ಹಾಕಿದೆ.

    ನ್ಯಾಯಾಂಗದ ಅಂಗವಾಗಿರುವ ನ್ಯಾಯವಾದಿಗಳಿಗೂ ಕೂಡ ಪ್ರವೇಶ ನಿರ್ಬಂದಿಸಿರುವ ಜಿಲ್ಲಾ ನ್ಯಾಯಾಧೀಶ ರವೀಂದ್ರ ಎಂ‌. ಜೋಶಿಯವರ ಕ್ರಮ ತೀವ್ರ ಟೀಕೆಗೆ ಒಳಗಾಗಿದೆ. ತಕ್ಷಣ ಈ ನಾಮಫಲಕವನ್ನು ತೆರವು ಗೊಳಿಸುವಂತೆ ಈಗಾಗಲೇ ವಕೀಲರ ಸಂಘ ಒತ್ತಾಯಿಸಿದೆ.

    ಆದರೆ, ವಕೀಲರ ಸಂಘದ ಮನವಿಗೆ ಸೂಕ್ತ ಸ್ಪಂದನೆ ಈವರೆಗೆ ದೊರಕಿಲ್ಲ.

    ಈ ಬಗ್ಗೆ ಚರ್ಚೆ ನಡೆಸಲು ಮುಂದಿನ ವಾರ ವಕೀಲರ ಸಭೆ ಕೂಡ ಕರೆಯಲಾಗಿದೆ ಎನ್ನಲಾಗಿದೆ. ನ್ಯಾಯಾಲಯ ಸಂಕೀರ್ಣದ ಮುಖ್ಯ ಪ್ರವೇಶ ದ್ವಾರದ ನಿರ್ಬಂಧದ ನಿಯಮ ಜಾರಿಯ ಮೊದಲ ದಿನವಾದ ಸೋಮವಾರ ಏನಾಗುತ್ತದೆ ಎಂದು ಕಾದು ನೋಡಬೇಕಿದೆ.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.