Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ನಾಯಿ..!
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ನಾಯಿ..!

    June 29, 2024
    Share

    ಮಂಗಳೂರು: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನು ನಾಯಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ನಡೆದಿದೆ.

    ಪತಿಯೊಂದಿಗೆ ಜಗಳವಾಡಿದ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ನಾಲ್ಕು ಕಿ.ಮೀ. ದೂರದ ಉಪ್ಪಿನಂಗಡಿಗೆ ರಾತ್ರಿ ವೇಳೆ ನಡೆದುಕೊಂಡು ಬಂದಿದ್ದಾರೆ.

    ಅವರನ್ನು ಸಾಕು ನಾಯಿ ಹಿಂಬಾಲಿಸಿಕೊಂಡು ಬಂದಿದ್ದು, ನದಿಗೆ ಹಾರಲು ಸೇತುವೆ ಬಳಿ ಹೋಗುವಾಗ ಚೂಡಿದಾರ ಹಿಡಿದಿಳೆದು ನಿರಂತರವಾಗಿ ಬೊಗಳಿದೆ. ನಾಯಿ ನಿರಂತರವಾಗಿ ಬೊಗಳುಗುವುದನ್ನು ಗಮನಿಸಿದ ಬೈಕ್ ಸವಾರ ಹಾಗೂ ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದಾರೆ.

    16 ವರ್ಷದ ಹಿಂದೆ ದಂಪತಿ ಪ್ರೀತಿಸಿ ಮದುವೆಯಾಗಿದ್ದು, ಕೆಲವು ವರ್ಷಗಳಿಂದ ವಿರಸವಾಗಿತ್ತು. ಗುರುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿದ್ದು, ಬೇಸರಗೊಂಡ ಪತ್ನಿ ನೇತ್ರಾವತಿ ನದಿ ಸೇತುವೆಯಿಂದ ನದಿಗೆ ಹಾರಲು ಬಂದಿದ್ದಾರೆ. ಆಕೆಯನ್ನು ಹಿಂಬಾಲಿಸಿ ಬಂದ ನಾಯಿ ಚೂಡಿದಾರ ಹಿಡಿದೆಳೆದು ನಿರಂತರವಾಗಿ ಬೊಗಳಿದೆ. ಇದನ್ನು ಗಮನಿಸಿದ ಬೈಕ್ ಸವಾರರೊಬ್ಬರು ಸ್ಥಳೀಯರಾದ ಯು.ಟಿ. ಫಯಾಜ್ ಅವರಿಗೆ ವಿಷಯ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಅವರು ಮಹಿಳೆಯನ್ನು ರಕ್ಷಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ಪೊಲೀಸರಿಗೆ ಒಪ್ಪಿಸಿದ್ದಾರೆ.

    Post Views: 280

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.