Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಸ್ಸಿನಿಂದ ಎಸೆಯಲ್ಪಟ್ಟ ವಿದ್ಯಾರ್ಥಿ ಮೆದುಳು ನಿಷ್ಕ್ರಿಯ- ಅಂಗಾಂಗಗಳನ್ನು ದಾನ ಮಾಡಿದ ಕುಟುಂಬಸ್ಥರು
    ಇತ್ತೀಚಿನ ಸುದ್ದಿ

    ಬಸ್ಸಿನಿಂದ ಎಸೆಯಲ್ಪಟ್ಟ ವಿದ್ಯಾರ್ಥಿ ಮೆದುಳು ನಿಷ್ಕ್ರಿಯ- ಅಂಗಾಂಗಗಳನ್ನು ದಾನ ಮಾಡಿದ ಕುಟುಂಬಸ್ಥರು

    September 20, 2022
    Share

    ಮಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡ ಹಿನ್ನಲೆಯಲ್ಲಿ ಆತನ ಅಂಗಾಂಗಗಳನ್ನು ದಾನ ಮಾಡಿ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆ ಮೆರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.

    ಯಶರಾಜ್ (16) ಮೃತ ದುರ್ದೈವಿ. ಚಲಿಸುತ್ತಿದ್ದ ಸಿಟಿ ಬಸ್ ನಿಂದ ಎಸೆಯಲ್ಪಟ್ಟು ಯಶರಾಜ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಪಕಾರಿಯಾಗದೇ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿತ್ತು.

    ಮೃತ ಬಾಲಕ ಯಶರಾಜ್, ಉಳ್ಳಾಲ ಮಾಸ್ತಿಕಟ್ಟೆ ಬೈದರಪಾಲು ನಿವಾಸಿ ತ್ಯಾಗರಾಜ್ ಮತ್ತು ಮಮತಾ ಕರ್ಕೇರ ದಂಪತಿಯ ಪುತ್ರನಾಗಿದ್ದು, ಯಶರಾಜ್‌ ನಗರದ ಎಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ದರ್ಜೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದ. ಸೆಪ್ಟೆಂಬರ್​ 7 ರಂದು ಬೆಳಗ್ಗೆ ಯಶರಾಜ್ ಮಾಸ್ತಿಕಟ್ಟೆಯಿಂದ ಸಿಟಿ ಬಸ್​ನಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಅಡಂ ಕುದ್ರುವಿನಲ್ಲಿ ಬಸ್ ನಿಂದ ಹೊರಗೆ ಎಸೆಯಲ್ಪಟ್ಟಿದ್ದ.

    ಹೀಗಾಗಿ ವಿದ್ಯಾರ್ಥಿ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಯಶರಾಜ್​​ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಯಶರಾಜ್ ಮೆದಳು ನಿಷ್ಕ್ರಿಯ ಗೊಂಡಿತ್ತು. ದುಃಖದ ಮಡುವಿನಲ್ಲಿದ್ದ ಕುಟುಂಬಸ್ಥರು ವೈದ್ಯರ ಸಲಹೆ ಮೇರೆಗೆ ಯಶರಾಜ್​ ಅಂಗಾಂಗಗಳನ್ನು ದಾನ ಮಾಡಿ ಹಲವರ ಜೀವನಕ್ಕೆ ಮರುಜೀವ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಮೃತ ವಿದ್ಯಾರ್ಥಿ ಯಶರಾಜ್‌ ಕುಟುಂಬಸ್ಥರು ದೂರು ನೀಡಿದ್ದಾರೆ. ಇನ್ನು ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಸ್ಸಿನ ಚಾಲಕ ಕಾರ್ತಿಕ್ ಶೆಟ್ಟಿ ಹಾಗೂ ನಿರ್ವಾಹಕ ದಂಶೀರ್​ನನ್ನು ಪೊಲೀಸರು ಬಂಧಿಸಿದ್ದಾರೆ.

    Post Views: 210

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.