Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಾರ್ವಜನಿಕರ ಸುರಕ್ಷತೆಗಾಗಿ ಇನ್ಮುಂದೆ ಮನೆ ಮನೆಗೆ ಪೊಲೀಸ್!
    ಇತ್ತೀಚಿನ ಸುದ್ದಿ

    ಸಾರ್ವಜನಿಕರ ಸುರಕ್ಷತೆಗಾಗಿ ಇನ್ಮುಂದೆ ಮನೆ ಮನೆಗೆ ಪೊಲೀಸ್!

    June 28, 2025
    Share

    ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಉಪಕ್ರಮವನ್ನು ರಾಜ್ಯ ಪೊಲೀಸ್ ಇಲಾಖೆ ಜಾರಿಗೊಳಿಸಿದೆ.

    ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಸರ್ವರನ್ನು ಸಮಾನರಾಗಿ ಒಳಗೊಂಡು ಸಾರ್ವಜನಿಕ ಕಾರ್ಯದಲ್ಲಿ ನೇರವಾಗಿ ಪಾಲ್ಗೊಳ್ಳುವಿಕೆ ಖಾತರಿ ಪಡಿಸಿ, ಸಾಮಾಜಿಕ ಪಿಡುಗುಗಳ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ವ್ಯವಸ್ಥೆಯು ಒಂದು ಆಶಾಕಿರಣವಾಗಲಿದೆ. ಈ ಉಪಕ್ರಮದ ಮೂಲಕ ಪೊಲೀಸರ ಬಗ್ಗೆ ಇರುವ ಭಯದ ಭಾವದ ಬದಲು ವಿಶ್ವಾಸದ ಚಿಹ್ನೆಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ.

    ಆಧುನಿಕ ಯುಗದಲ್ಲಿ ಪೊಲೀಸ್ ಪಾತ್ರವು ಬಹುಮುಖ್ಯವಾಗಿದೆ. ಕೇವಲ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವವರಾಗಿ ಮಾತ್ರವಲ್ಲದೇ, ಸಮಾಜದ ಶಾಂತಿ ಮತ್ತು ಭದ್ರತೆಯ ರೂವಾರಿಗಳಾಗಿದ್ದಾರೆ. ಅಪರಾಧಗಳ ತಡೆ, ಅಪರಾಧ ಪ್ರಕರಣಗಳ ತನಿಖೆ, ಸಾರ್ವಜನಿಕ ಸಮಾರಂಭಗಳಲ್ಲಿ ಭದ್ರತೆ ಏರ್ಪಡಿಸುವುದು, ಪ್ರವಾಹ, ಭೂಕಂಪ, ಮುಂತಾದ ಸಂದರ್ಭಗಳಲ್ಲಿ ರಕ್ಷಣಾತ್ಮಕ ಕಾರ್ಯಗಳಲ್ಲಿ  ಶಾಂತಿಯುತವಾಗಿ ನಿಭಾಯಿಸುವ ಮೂಲಕ ಪೊಲೀಸರು ಸಾರ್ವಜನಿಕರಲ್ಲಿ ಭದ್ರತೆ ಮತ್ತು ವಿಶ್ವಾಸ ಉಂಟು ಮಾಡುವುದು ಇಲಾಖೆಯ ಆದ್ಯತೆಯಾಗಿದೆ.

    ಸಾರ್ವಜನಿಕರಲ್ಲಿ ಕಾನೂನುಗಳ ಬಗ್ಗೆ ತಿಳುವಳಿಕೆ ಬೆಳೆಸುವುದು ಮತ್ತು ಪೌರ ಸಹಭಾಗಿತ್ವದ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಇಲಾಖೆಯು ಪ್ರಗತಿಪರ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ. ಅಧುನಿಕ ತಂತ್ರಜ್ಞಾನಗಳ ಬಳಕೆಯಿಂದ ಪೊಲೀಸ್ ಇಲಾಖೆಯು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಸೇವಾ ದಿಟ್ಟ ನೋಟದೊಂದಿಗೆ ತನ್ನ ಕಾರ್ಯವ್ಯಾಪ್ತಿ ವಿಸ್ತರಿಸುತ್ತಿದೆ.

    ಸೈಬರ್ ಅಪರಾಧ ಅಧ್ಯಯನ ವರದಿ ಬಿಡುಗಡೆ

    ಸೈಬರ್ ಅಪರಾಧಗಳಲ್ಲಿ ಅಕ್ರಮ ಹಣ ವರ್ಗಾವಣೆಗೆ ನಕಲಿ ಬ್ಯಾಂಕ್ ಖಾತೆಗಳ ಬಳಕೆಯ ಬಗ್ಗೆ ರಾಜ್ಯ ಪೊಲೀಸ್ ಇಲಾಖೆ ಅಧ್ಯಯನ ವರದಿ ಬಿಡುಗಡೆ ಮಾಡಿದೆ. ಸೈಬರ್ ಅಪರಾಧ ಪ್ರಕರಣಗಳಲ್ಲಿ ಆಕ್ರಮ ಹಣದ ವರ್ಗಾವಣೆಗೆ ವ್ಯಾಪಕವಾಗಿ ನಕಲಿ ಬ್ಯಾಂಕ್ ಖಾತೆಗಳ ಬಳಕೆಯ ಬಗ್ಗೆ ಅಧ್ಯಯನ ಮಾಡಿ ಅವುಗಳನ್ನು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳನ್ನು ಶಿಪಾರಸು ಮಾಡಲು ಸಿಐಡಿಯ ಸೈಬರ್ ಅಪರಾಧ ತನಿಖಾ ತರಬೇತಿ ಮತ್ತು ರಚಿಸಲಾಯಿತು, ಈ ತಂಡದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ತನಿಖಾಧಿಕಾರಿಗಳು, ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ಡಿಎಸ್ಸಿಐತಜ್ಞರು, ಬ್ಯಾಂಕಿಂಗ್ ವಲಯದ ಪ್ರತಿನಿಧಿಗಳು ಒಳಗೊಂಡಿದ್ದರು. ಈ ಅಧ್ಯಯನದಲ್ಲಿ ಕಳೆದ ಸಾಲಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಎನ್‌ ಸಿಆರ್ ಪೋರ್ಟಲ್‌ನಲ್ಲಿ ಸ್ವೀಕರಿಸಲಾದ ದೂರುಗಳನ್ನು ಹಾಗೂ ನಗರದಲ್ಲಿ ದಾಖಲಾದ ಸೈಬರ್ ಅಪರಾಧ ಪ್ರಕರಣಗಳ ಮಾಹಿತಿ ಕ್ರೋಡೀಕರಿಸಿ ವಿಶ್ಲೇಷಣೆ ಮಾಡಲಾಗಿದೆ. ಅಲ್ಲದೇ ಪೊಲೀಸ್ ಅಧಿಕಾರಿಗಳು, ತಂತ್ರಜ್ಞರು, ಬ್ಯಾಂಕಿಂಗ್ ವಲಯದ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಚರ್ಚೆ ಮಾಡಲಾಗಿದೆ.

    ಕಾನೂನು ಜಾಗೃತಿ ಹೇಗೆ?

    ಶಾಲಾ-ಕಾಲೇಜುಗಳಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮಗಳು, ಮಹಿಳಾ ಭದ್ರತೆ ಕುರಿತ ಕಾರ್ಯಾಗಾರಗಳು ಮತ್ತು ಯುವ ಜನರಿಗೆ ಪೊಲೀಸ್ ಸೇವೆಗಳ ಬಗ್ಗೆ ಅರಿವು ಮೂಡಿಸುವ ಸಭೆಗಳನ್ನು ಏರ್ಪಡಿಸಲಾಗುತ್ತದೆ.

    ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟುವುದು. ಜನರಲ್ಲಿ ನಂಬಿಕೆ ಬೆಳೆಸುವುದು-ಸಮುದಾಯ ಪೊಲೀಸ್ ವ್ಯವಸ್ಥೆಯು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು.

    ಯುವ ಜನರನ್ನು ಸಕಾರಾತ್ಮಕ ಚಟುವಟಿಕೆಗಳನ್ನು ತೊಡಗಿಸಲು ಇದು ಸಹಾಯ ಮಾಡುತ್ತದೆ. ಒಟ್ಟಾರೆ ಸಮಾಜದಲ್ಲಿ ಗಂಭೀರ ಸಮಸ್ಯೆ ಉದ್ಭವಿಸುವ ಮೊದಲೇ ಪರಿಹಾರೋಪಾಯಗೊಂದಿಗೆ ಸನ್ನದ್ದರಾಗಿರುವಂತಹ ವಾತಾವರಣ ರೂಪುಗೊಂಡಿರುತ್ತದೆ.

    ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳನ್ನು ಶಿಫಾರಸು ಮಾಡಿದ್ದು, ಈ ಕ್ರಮಗಳನ್ನು ಮೂರು ವರ್ಗಗಳಲ್ಲಿ ವಿವರಿಸಲಾಗಿದೆ. ಅವುಗಳೆಂದರೆ, ಬ್ಯಾಂಕ್‌ಗಳು ಹಾಗೂ ಇತರ ಹಣಕಾಸು ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು, ಪೊಲೀಸ್ ಮತ್ತು ಇತರೆ ಕಾನೂನು ಜಾರಿ ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು ಹಾಗೂ ಸರಕಾರ ಮತ್ತು ನಿಯಂತ್ರಕರು ಕೈಗೊಳ್ಳಬಹುದಾದ ಕ್ರಮಗಳು, ಈ ಅಧ್ಯಯನ ವರದಿಯನ್ನು ಕೇಂದ್ರ ಸರಕಾರ, ಇತರ ಕಾನೂನು ಜಾರಿ ಸಂಸ್ಥೆಗಳು, ವಿವಿದ ಬ್ಯಾಂಕ್‌ಗಳು ಹಾಗೂ ಇತರೆ ಹಣಕಾಸು ಸಂಸ್ಥೆಗಳೊಂದಿಗೆ. ಹಂಚಿಕೊಳ್ಳುವ ಉದ್ದೇಶವಿದೆ.

    Post Views: 264

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.