Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹಣ ಡಬಲ್ ಮಾಡುವುದಾಗಿ ನಂಬಿಸಿ 3.7 ಲಕ್ಷ ರೂ‌. ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಹಣ ಡಬಲ್ ಮಾಡುವುದಾಗಿ ನಂಬಿಸಿ 3.7 ಲಕ್ಷ ರೂ‌. ವಂಚನೆ

    December 20, 2024
    Share

    ಮಂಗಳೂರು : ಹಣವನ್ನು ಡಬಲ್ ಮಾಡುವುದಾಗಿ ನಂಬಿಸಿ ವಂಚಕನೋರ್ವನು ವ್ಯಕ್ತಿಯೊಬ್ಬರಿಗೆ 3.7 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.13ರಂದು ಅಪರಿಚಿತನೋರ್ವನು ಸಂತ್ರಸ್ತ ವ್ಯಕ್ತಿಯ ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿ GLOBAL INVESTMENTನಲ್ಲಿ 5000ರೂ. ಹಣ ಹೂಡಿಕೆ ಮಾಡಿದರೆ 10,000ರೂ. ವಾಪಾಸು ಕೊಡುವುದಾಗಿ ನಂಬಿಸಿದ್ದಾರೆ. ಆರೋಪಿಯ ಮಾತನ್ನು ನಂಬಿದ ವ್ಯಕ್ತಿ UPI ಮೂಲಕ 5,000ರೂ. ವರ್ಗಾವಣೆ ಮಾಡಿದ್ದಾರೆ. ಆ ವ್ಯಕ್ತಿಯ ಬ್ಯಾಂಕ್ ಖಾತೆಗೆ ಅದೇ ದಿನ 10,000ರೂ. ವರ್ಗಾವಣೆ ಮಾಡಿರುತ್ತಾರೆ. ಡಿ.14ರಂದು ಅಪರಿಚಿತ ವ್ಯಕ್ತಿ 19,000ರೂ. ಹಣ INVESTMENT ಮಾಡುವಂತೆ ತಿಳಿಸಿದ್ದಾರೆ. ಅದರಂತೆ 19,000ರೂ. ಹಣ ಹೂಡಿಕೆ ಮಾಡಿದ್ದಾರೆ. ಆದರೆ ಅಪರಿಚಿತ ತಾವು ತಪ್ಪಾಗಿ ಹಣ ವರ್ಗಾವಣೆ ಮಾಡಿದ್ದೀರಿ ಎಂದು ಡಿ.13ರಿಂದ ಡಿ.15ರವರೆಗೆ ಒಟ್ಟು 3,70,000ರೂ. ಹಣರ್ಗಾವಣೆ ಮಾಡಿಸಿದ್ದಾನೆ. ಆದರೆ ಆರೋಪಿಯು ಮೊದಲೇ ನಂಬಿಸಿದಂತೆ ಹೂಡಿಕೆ ಮಾಡಿದ ಹಣವನ್ನು ದುಪ್ಪಟ್ಟು ಮಾಡಿಕೊಡದೇ, ಹೂಡಿಕೆ ಮಾಡಿರುವ ಹಣವನ್ನು ವಾಪಾಸು ಕೊಡದೇ ವಂಚನೆ ಮಾಡಿದ್ದಾನೆ ಎಂದು ಪೊಲೀಸ್ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Post Views: 139

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.