Facebook Twitter Instagram
    Friday, October 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಗುಣಮುಖರಾಗಿ ಮರಳಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಅದ್ದೂರಿ ಸ್ವಾಗತ – ಸಮಾಜಸೇವೆಗೆ ₹2 ಕೋಟಿ ಮೀಸಲು ಘೋಷಣೆ.
    ಇತ್ತೀಚಿನ ಸುದ್ದಿ

    ಮಂಗಳೂರು : ಗುಣಮುಖರಾಗಿ ಮರಳಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಅದ್ದೂರಿ ಸ್ವಾಗತ – ಸಮಾಜಸೇವೆಗೆ ₹2 ಕೋಟಿ ಮೀಸಲು ಘೋಷಣೆ.

    October 16, 2026
    Share

    ಮಂಗಳೂರು : “ನಾನು ಬದುಕಿ ಬಂದು ಮತ್ತೆ ನಿಮ್ಮೊಂದಿಗೆ ವೇದಿಕೆ ಹಂಚಿಕೊಳ್ಳುತ್ತೇನೆ ಎಂಬ ಗ್ಯಾರಂಟಿ ಇರಲಿಲ್ಲ. ನಿಮ್ಮೆಲ್ಲರ ಪ್ರೀತಿ, ಆಶೀರ್ವಾದ ಮತ್ತು ಹಾರೈಕೆಯಿಂದ ಮತ್ತೆ ನಿಮ್ಮೊಂದಿಗೆ ಬೆರೆಯುವಂತಾಗಿದೆ” ಎಂದು ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಭಾವುಕರಾಗಿ ನುಡಿದರು,

    ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಅವರು ಗುಣಮುಖರಾಗಿ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್‌ಸಿಡಿಸಿಸಿ) ಬ್ಯಾಂಕ್‌ನ ಸಭಾಂಗಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಅವರ ಆರೋಗ್ಯದ ಶುಭ ಹಾರೈಕೆಯೊಂದಿಗೆ ಗುರುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ, ಅಶಕ್ತರಿಗೆ ನೆರವು ಹಾಗೂ ಉಡುಪಿ ಜಿಲ್ಲಾಡಳಿತದ ಪರಿಸರಸ್ನೇಹಿ ಯೋಜನೆಗೆ ವಾಹನ ಕೊಡುಗೆ ನೀಡಲಾಯಿತು

    ಈ ವೇಳೆ ಮಾತನಾಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ತಮ್ಮ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸಿದ ಎಲ್ಲ ಹಿತೈಷಿಗಳಿಗೆ, ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ಆರೋಗ್ಯ ಸುಧಾರಣೆಗೆ ಶ್ರಮಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಎಲ್ಲರ ಪ್ರೀತಿ, ಬೆಂಬಲ ಮತ್ತು ಹಾರೈಕೆಯಿಂದ ಮತ್ತೆ ಸಮಾಜದೊಂದಿಗೆ ಬೆರೆಯುವಂತಾಗಿದೆ. ತಮ್ಮ ಮೇಲಿನ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಭಾವುಕರಾಗಿ ಹೇಳಿದರು.

    ಮುಂದಿನ ದಿನಗಳಲ್ಲಿಯೂ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನವೋದಯ ಸಂಘಟನೆಯನ್ನು ಇನ್ನಷ್ಟು ಬೆಳೆಸಲು ಶ್ರಮಿಸುವುದಾಗಿ ರಾಜೇಂದ್ರ ಕುಮಾರ್ ತಿಳಿಸಿದರು.

    ತಿರುಪತಿಗೆ ₹1 ಕೋಟಿ ನೀಡುವುದಾಗಿ ಘೋಷಿಸಿದ ಅವರು, ಜಿಲ್ಲೆಯ ಎಲ್ಲ ದೇವಸ್ಥಾನಗಳು ಮತ್ತು ದೈವಸ್ಥಾನಗಳಿಗೆ ತಮ್ಮಿಂದ ಸಾಧ್ಯವಾದ ನೆರವು ನೀಡುವುದಾಗಿ ಹೇಳಿದರು. ಸಂಕಷ್ಟ ಎದುರಿಸುವ ಬಡ ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ ನವೋದಯದಲ್ಲಿ ₹1 ಕೋಟಿ ಮೀಸಲಿಡುವುದಾಗಿಯೂ ತಿಳಿಸಿದರು. ಕಾರ್ಕಳದ ಮಹಾಮಸ್ತಕಾಭಿಷೇಕಕ್ಕೆ ₹50 ಲಕ್ಷ ನೀಡುವುದಾಗಿ ಘೋಷಿಸಿದ ಅವರು, ಮುಂದಿನ ದಿನಗಳಲ್ಲಿಯೂ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದರು.

    ‘ನಮ್ಮದು ಸಹಕಾರ ಪಕ್ಷ’: ರಾಜೇಂದ್ರ ಕುಮಾರ್ಸಹಕಾರಿ ಕ್ಷೇತ್ರದಲ್ಲಿ ಯಾರಿಗಾದರೂ ಅನ್ಯಾಯವಾದರೆ ಅದನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ರಾಜೇಂದ್ರ ಕುಮಾರ್, ಯಾವುದೇ ಪಕ್ಷ ಅಥವಾ ಜಾತಿಯ ಭೇದಭಾವವಿಲ್ಲದೆ ‘ನಮ್ಮದು ಸಹಕಾರ ಪಕ್ಷ’ ಎಂಬ ಧ್ಯೇಯದೊಂದಿಗೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು. ಸಹಕಾರಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನಸೇವೆಗೆ ತಮ್ಮ ಬದ್ಧತೆಯನ್ನು ಮುಂದುವರಿಸುವುದಾಗಿ ಅವರು ಹೇಳಿದರು.

    ‘ಉಡುಪಿ ಸುಗಂಧ’ ಯೋಜನೆಗೆ ವಾಹನ ಕೊಡುಗೆ

    ಉಡುಪಿ ಜಿಲ್ಲಾಡಳಿತ ದೇವಸ್ಥಾನಗಳಲ್ಲಿ ದೇವರಿಗೆ ಅರ್ಪಿಸಿದ ಬಳಿಕ ಉಳಿಯುವ ಹೂವುಗಳನ್ನು ಮರುಬಳಕೆ ಮಾಡುವ ಉದ್ದೇಶದಿಂದ ‘ಉಡುಪಿ ಸುಗಂಧ’ ಎಂಬ ವಿನೂತನ ಪರಿಸರಸ್ನೇಹಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಗೆ ಹೂವುಗಳ ಸಂಗ್ರಹಕ್ಕಾಗಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಾಹನ ಕೊಡುಗೆ ನೀಡಿದ್ದು, ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರಿಗೆ ವಾಹನದ ಕೀಲಿಯನ್ನು ಹಸ್ತಾಂತರಿಸಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಅವರು, “ದೇವರ ಮುಡಿಗೇರಿದ ಹೂವು ಕಸಕ್ಕೆ ಸೇರಬಾರದು ಎಂಬ ಉದ್ದೇಶದಿಂದ ದೇವಸ್ಥಾನಗಳಿಂದ ಹೂವುಗಳನ್ನು ಸಂಗ್ರಹಿಸಿ, ಅವುಗಳಿಂದ ಪರಿಸರಸ್ನೇಹಿ ಧೂಪದ ಕಡ್ಡಿಗಳು ಹಾಗೂ ಸುಗಂಧ ದ್ರವ್ಯಗಳನ್ನು ತಯಾರಿಸಲಾಗುತ್ತದೆ” ಎಂದು ತಿಳಿಸಿದರು.ಈಗಾಗಲೇ ಯೋಜನೆಯಡಿ 30 ಮಹಿಳೆಯರಿಗೆ ತರಬೇತಿ ನೀಡಲಾಗಿದೆ. ಹೂವಿನ ತ್ಯಾಜ್ಯವನ್ನು ಉಪಯುಕ್ತ ಉತ್ಪನ್ನಗಳಾಗಿ ಪರಿವರ್ತಿಸುವುದರ ಜೊತೆಗೆ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಪ್ರಯತ್ನವೂ ನಡೆಯುತ್ತಿದೆ.

    ಸಮಾಜಸೇವೆಗೆ ಮಹನೀಯರ ಕೊಡುಗೆ ಅಪಾರ: ಶ್ರೀಗಳು

    ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ವಿಜಯದಶಮಿ ಹಾಗೂ ನವರಾತ್ರಿ ಪರ್ವಕಾಲದಲ್ಲಿ ಸಮಾಜಕ್ಕೆ ಶಕ್ತಿ, ಪ್ರೇರಣೆ ಮತ್ತು ಒಗ್ಗಟ್ಟು ನೀಡುವ ಕಾರ್ಯಗಳು ಮಹತ್ವದ್ದಾಗಿವೆ ಎಂದು ಹೇಳಿದರು.ನವರಾತ್ರಿ ಉತ್ಸವವು ಪಂಚ ಮಹಾಪರ್ವಗಳಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಜನರಲ್ಲಿ ಹರ್ಷ ಮತ್ತು ಉಲ್ಲಾಸ ತುಂಬುತ್ತದೆ. ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಂತಹ ಮಹನೀಯರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ. ಅವರು ನೂರು ಕಾಲ ಸುಖವಾಗಿ ಬಾಳಿ, ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಹಾರೈಸಿದರು.

    ದೇವರ ಸೇವೆ ಮತ್ತು ಸಮಾಜಸೇವೆ ಒಂದಕ್ಕೊಂದು ಪೂರಕವಾಗಿವೆ ಎಂದು ತಿಳಿಸಿದ ಶ್ರೀಗಳು, ದೇವಸ್ಥಾನಗಳಿಂದ ಹೂವುಗಳನ್ನು ಗೌರವಯುತವಾಗಿ ಸಂಗ್ರಹಿಸಲು ನೀಡಿರುವ ವಾಹನದ ಸದ್ಬಳಕೆಯಾಗಲಿ ಎಂದು ಆಶಿಸಿದರು.

    ಎಲ್ಲ ವರ್ಗದ ಜನರೊಂದಿಗೆ ಆತ್ಮೀಯ ಸಂಬಂಧ: ಮೋಹನ್ ಆಳ್ವ

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಯಾವುದೇ ಜಾತಿ, ಸಮುದಾಯ ಅಥವಾ ಕುಟುಂಬಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ ಎಂದು ಹೇಳಿದರು.

    ಅವರ ಸುಖದಲ್ಲಿ ಸಂತೋಷಪಡುವುದು, ಕಷ್ಟದಲ್ಲಿ ಜೊತೆಯಾಗಿ ನಿಲ್ಲುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅವರ ಆರೋಗ್ಯ ವೃದ್ಧಿಸಿ, ನೂರು ಕಾಲ ಬಾಳುವಂತಾಗಲಿ ಹಾಗೂ ಅವರ ಮಾರ್ಗದರ್ಶನ ಸಮಾಜಕ್ಕೆ ನಿರಂತರವಾಗಿ ದೊರೆಯಲಿ ಎಂದು ಹಾರೈಸಿದರು.

    ಗಣ್ಯರ ಉಪಸ್ಥಿತಿ

    ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಕೆಎಂಎಫ್ ನಿರ್ದೇಶಕ ರವಿರಾಜ್ ಹೆಗ್ಡೆ, ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಭಾಸ್ಕರ್ ಹೆಗ್ಡೆ ಹಾಗೂ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಿನಾಥ್ ಭಟ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಬೊಳ್ಳೆಟ್ಟು ಶಶಿಕುಮಾರ್ ರೈ ವಂದಿಸಿದರು. ಪತ್ರಕರ್ತ ಕೆ.ಸಿ. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

    ಅನಾರೋಗ್ಯದಿಂದ ಗುಣಮುಖರಾಗಿ ಮರಳಿದ ರಾಜೇಂದ್ರ ಕುಮಾರ್ ಅವರ ಕೃತಜ್ಞತಾ ಮಾತುಗಳು, ಸಹಕಾರಿ ಕ್ಷೇತ್ರದ ಅಭಿವೃದ್ಧಿಯ ಸಂಕಲ್ಪ, ಅಶಕ್ತರಿಗೆ ನೆರವು ಹಾಗೂ ಪರಿಸರಸ್ನೇಹಿ ಯೋಜನೆಗೆ ನೀಡಿದ ವಾಹನ ಕೊಡುಗೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಗಳಾಗಿದ್ದವು.

    Post Views: 9

    Related Posts

    ಅಪ್ರಾಪ್ತ ಬಾಲಕನಿಗೆ ನಿರಂತರ ಲೈಂಗಿಕ ಕಿರುಕುಳ ಆರೋಪ; ಮಂಗಳೂರಿನ ಫಾದರ್ ವಿರುದ್ಧ ಪ್ರಕರಣ ದಾಖಲು

    October 16, 2026

    ಮಂಗಳೂರು: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

    October 16, 2026

    ಪುತ್ತೂರು: ಸಂಟ್ಯಾ‌ರ್ ಬಳಿ ಭೀಕರ ಅಪಘಾತ-ಗಾಯಾಳು ಆಸ್ಪತ್ರೆಗೆ ದಾಖಲು,ಹೆದ್ದಾರಿ ಸಂಚಾರಕ್ಕೆ ತಡೆ!!

    October 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಪ್ರಾಪ್ತ ಬಾಲಕನಿಗೆ ನಿರಂತರ ಲೈಂಗಿಕ ಕಿರುಕುಳ ಆರೋಪ; ಮಂಗಳೂರಿನ ಫಾದರ್ ವಿರುದ್ಧ ಪ್ರಕರಣ ದಾಖಲು

    October 16, 2026

    ಮಂಗಳೂರು : ಗುಣಮುಖರಾಗಿ ಮರಳಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಅದ್ದೂರಿ ಸ್ವಾಗತ – ಸಮಾಜಸೇವೆಗೆ ₹2 ಕೋಟಿ ಮೀಸಲು ಘೋಷಣೆ.

    October 16, 2026

    ಮಂಗಳೂರು: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

    October 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.