ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಲಕ್ಸುರಿ ಕಾರೊಂದು ಪಲ್ಟಿಯಾದ ಘಟನೆ ಮುಂಡ್ಕೂರು- ಜಾರಿಗೆಕಟ್ಟೆ ಚರ್ಚ್ ಬಳಿ ನಡೆದಿದೆ.
ಕಾರು ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾರೆ.
ಕಟೀಲು ಪಾದಯಾತ್ರೆ ನಡೆಸುತ್ತಿರುವ ಭಕ್ತರು ಕೂಡಲೇ ಸಮಾಜಸೇವಕ ಕೆದಿಂಜೆ ಸುಪ್ರಿತ್ ಶೆಟ್ಟಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಗಾಯಳುಗಳನ್ನು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದ್ದಾರೆ.