ಪುತ್ತೂರು: ಮಾದಕ ವಸ್ತು ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿದ್ದು ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ತಾಲೂಕು, ಪುತ್ತೂರು ಕಸಬಾ ಗ್ರಾಮದ ಹಳೆ ನಿರಾಳ ಬಾರ್ನದಲ್ಲಿ ನಡೆದಿದೆ. ಬಂಧಿತನನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮ ದೂಮಡ್ಕ ನಿವಾಸಿ ಮೆಹಬೂಬ್ (44) ಎಂದು ಗುರುತಿಸಲಾಗಿದೆ. ಅ. 8 ರಂದು ಮದ್ಯಾಹ್ನದ ವೇಳೆ ಪುತ್ತೂರು ಕಸಬಾ ಗ್ರಾಮದ ಹಳೆ ನಿರಾಳ ಬಾರ್ನ ಹಿಂದುಗಡೆ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಪುತ್ತೂರು ನಗರ ಠಾಣೆ ಉಪ ನಿರೀಕ್ಷಕರಾದ ಆಂಜನೇಯ ರೆಡ್ಡಿ ಜಿ.ವಿ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ತೆರಳಿದರು. ಈ ವೇಳೆ ವ್ಯಕ್ತಿ ಓಡಿ ಹೋಗಲು ಪ್ರಯತ್ನಿಸಿದ್ದು ಆತನನ್ನು ಸಿಬ್ಬಂದಿಗಳ ಸಹಾಯದಿಂದ ವಶಕ್ಕೆ ಪಡೆದು ವಿಚಾರಿಸಿದಾಗ ಆತನ ಹೆಸರು ವಿಳಾಸ ಮೆಹಬೂಬ್ (44) ವರ್ಷ, ದೂಮಡ್ಕ ಅಂಚೆ ಇರ್ದೆ ಗ್ರಾಮ ಪುತ್ತೂರು ತಾಲೂಕು ಎಂಬುದಾಗಿ ತಿಳಿಸಿದ. ಆತ ಯಾವುದೋ ಸೇವಿಸಿದವನಂತೆ ಕಂಡುಬಂದ ಹಿನ್ನೆಲೆಯಲ್ಲಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದು, ಆತ ಮಾದಕವಸ್ತುವನ್ನು ಸೇವಿಸಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ: 89/2024 27 (b) NDPS Act ಯಂತೆ ಪ್ರಕರಣ ದಾಖಲಾಗಿರುತ್ತದೆ.