Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ ರಚನೆ- ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ
    ಇತ್ತೀಚಿನ ಸುದ್ದಿ

    ಮಂಗಳೂರು : ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ ರಚನೆ- ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ

    June 27, 2025
    Share

    ಮಂಗಳೂರು : ಮಂಗಳೂರು ನಗರ ಪೊಲೀಸ್ ಮತ್ತು ದ.ಕ ಜಿಲ್ಲಾ ಪೊಲೀಸ್ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಾಧಕ ಮತ್ತು ವಸ್ತು ವಿರೋಧಿ ದಿನ 2025 ಕಾರ್ಯಕ್ರಮ ಮಂಗಳೂರಿನ ಪುರಭವನದಲ್ಲಿ ನೆರವೇತು.

    ಕಾರ್ಯಕ್ರಮಕ್ಕೆ ಮಂಗಳೂರು ನಿಟ್ಟೆ ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ. ಎಂ ಎಸ್ ಮುಡಿತ್ತಾಯ, ತುಳು ಚಲನ ಚಿತ್ರ ನಟ ರೂಪೇಶ್ ಶೆಟ್ಟಿ, ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ದ.ಕ ಜಿಲ್ಲಾಧಿಕಾರಿ ಎಚ್ ವಿ ದರ್ಶನ್, ದ.ಕ ಜಿಲ್ಲಾ ಎಸ್ಪಿ ಡಾ. ಅರುಣ್. ಕೆ ಇತರ ಗಣ್ಯರು ಸೇರಿ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು

    ಬಳಿಕ ಮಂಗಳೂರು ನಿಟ್ಟೆ ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ. ಎಂ ಎಸ್ ಮುಡಿತ್ತಾಯ ಮಾತನಾಡಿ ಭಾರತ ಈಗಾಗಲೆ ಅಭಿವೃದ್ದಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಂದಿದ್ದು ಮುಂದಿನ ದಿನಗಳಲ್ಲಿ ಮೂರನೇ ಸ್ಥಾನಕ್ಕೆ ಏರಲಿದೆ. ಈ ಅಭೊವೃದ್ದಿ ಅಥವ ವಿಕಸಿತ ಭಾರತ ಯಾರಿಗೆ ಎಂದರೆ ಯುವ ಪೀಳಿಗೆಗೆ ಆಗಿದೆ. ಯುವ ಪೀಳಿಗೆ ದುಷ್ಚಟದತ್ತ ಆಕರ್ಷಿತರಾಗುವ ಒಂದು ಹಂತ ಇದಾಗಿದೆ. ಇಂತಹ ಕಾರ್ಯಕ್ರಮದ ಮೂಲಕ ಯುವ ಪೀಳಿಗೆಯನ್ನು ವಿಕಸಿತ ಭಾರತದತ್ತ ಮುನ್ನಡೆಸುವ ಯೋಜನೆಯನ್ನು ಮಂಗಳೂರು ಪೊಲೀಸ್ ಇಲಾಖೆ ಮಾಡ್ತಾ ಇದೆ ಇಂತಹ ಕಾರ್ಯಕ್ರಮಗಳು ಇನ್ನಷ್ಟು ಆಗಲಿ ಇದರ ಸದುಪಯೋಗ ಯುವ ಪೀಳಿಗೆ ಹೆಚ್ಚಾಗಿ ಪಡೆದುಕೊಳ್ಳಬೇಕಿದೆ ಎಂದವರು ಹೇಳಿದರು

    ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾತನಾಡಿ, ಕ್ಷಣಿಕ ಸುಖವನ್ನು ಬದಿಗಿಟ್ಟು ಮುಂದಿನ ಜೀವನಕ್ಕೆ ಬೇಕಾದ ಶಿಸ್ತನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ತಮ್ಮ ಮನೆ, ಸ್ನೇಹಿತರಿಂದಲೇ ಈ ದುಶ್ಚಟಗಳಿಂದ ದೂರವಿರುವಂತೆ ಜಾಗೃತಿ ಮೂಡಿಸಬೇಕು. ತಮ್ಮ ಸುತ್ತ ಮುತ್ತಲಲ್ಲಿ ಇಂತಹ ದುಶ್ಚಟಗಳಿಗೆ ಒಳಗಾದವರ ಬಗ್ಗೆ ಪೊಲೀಸ್ ಇಲಾಖೆಯ ಸಹಾಯವಾಣಿಗೆ ಗೌಪ್ಯ ವಾಗಿ ಮಾಹಿತಿ ನೀಡಬಹುದು. ಪೊಲೀಸರು ಮಾದಕ ವ್ಯಸನಕ್ಕೆ ತುತ್ತಾದವರನ್ನು ಬಂಧಿಸದೆ, ಅವರನು ಸಂತ್ರಸ್ತರೆಂದು ಪರಿಗಣಿಸಿ ಅದರಿಂದ ಹೊರಬರುವ ನಿಟ್ಟಿನಲ್ಲಿ ಸಹಕಾರ ನೀಡಲಿದ್ದಾರೆ ಎಂದು ಹೇಳಿದರು.

    ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಡ್ರಗ್ಸ್ ವಿರೋಧಿ ಪ್ರಮಾಣಪತ್ರ ಬೋಧಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ಪುರಭವನದಿಂದ ಕ್ಲಾಕ್ಟವರ್ವರೆಗೆ ವಿದ್ಯಾರ್ಥಿಗಳಿಂದ ನಡಿಗೆ ನಡೆಯಿತು.

    ಚಲನಚಿತ್ರ ನಟ ರೂಪೇಶ್ ಶೆಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡಿ, ಡ್ರಗ್ಸ್ನಂತಹ ಮಾದಕ ವ್ಯಸನಗಳ ಬಗ್ಗೆ ಅರ್ಥ ಮಾಡಿಕೊಳ್ಳದಿದ್ದರೆ ಜೀವನವೇ ಬೋರ್ ಆಗುತ್ತದೆ. ಜೀವನಕ್ಕೆ ನಶೆ ಬೇಕು ಆದರೆ ಅದು ಸಾಧನೆಯ ನಶೆಯಾಗಿರಬೇಕು.ಪೋಷಕರು ಸಂತಸ ಪಡುವ ನಶೆ ಬೇಕು. ಯುವಕರು ಸರಿಯಾದ ದಾರಿಯಲ್ಲಿ ನಡೆದಾಗ ಮಾತ್ರವೇ ದೇಶಕ್ಕೆ ಆಸ್ತಿಯಾಗುತ್ತಾರೆ. ಇಲ್ಲವಾದಲ್ಲಿ ಹೊರೆಯಾಗುತ್ತಾರೆ ಎಂದು ಹೇಳಿದರು.

    ‘ಡ್ರಗ್ಸ್ ವಿರುದ್ಧ ಜಾಗೃತಿ ಹಾಗೂ ನಿಗಾ ವಹಿಸುವ ನಿಟ್ಟಿನಲ್ಲಿ ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ ಗಳನ್ನು ರಚಿಸಿ ನಿಗಾ ವಹಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ಸಮಿತಿಯ ಮೂಲಕ ಡ್ರಗ್ಸ್ ಬಳಕೆಯ ಕುರಿತಂತೆ ತಪಾಸಣೆ ಮಾಡಿ, ಬಳಕೆ ಮಾಡುವವರನು ಸಂತ್ರಸ್ತರನ್ನಾಗಿ ಪರಿಗಣಿಸಿ ಅವರಿಗೆ ಅಗತ್ಯ ನೆರವು ಒದಗಿಸಬೇಕು. ವಿದ್ಯಾರ್ಥಿಗಳು ತಮ್ಮ ಸ್ನೇಹಿತರ ಬಗ್ಗೆ ಕಾಳಜಿ ವಹಿಸಿಕೊಂಡು ಅವರ ಜವಾಬ್ಧಾರಿ ತಮ್ಮ ಹೊಣೆ ಎಂದು ಭಾವಿಸಿದಾಗ ಮಾದಕ ದ್ರವ್ಯ ಬಳಕೆಯನ್ನು ನಿಯಂತ್ರಿಸಲು ಸಾಧ್ಯ ಆಗಲಿದೆ. ಡ್ರಗ್ಸ್ ಚಟಕ್ಕೆ ತುತ್ತಾದವರ ಬಗ್ಗೆ ಮಾಹಿತಿ ನೀಡಲು ಅನುಕೂಲವಾಗುವಂತೆ ಇಲಾಖೆಯಿಂದ ಕ್ಯೂಆರ್ ಕೋಡ್ ರೂಪಿಸಲಾಗಿದೆ. ಇದನ್ನು ಎಲ್ಲಾ ಕಾಲೇಜುಗಳಲ್ಲಿಯೂ ಲಭ್ಯವಾಗುವಂತೆ ಮಾಡಲಾ ಗುತ್ತದೆ. ಈ ಕ್ಯೂಆರ್ ಕೋಡ್ ಮೂಲಕ ಡ್ರಗ್ಸ್ ವ್ಯಸನಿಗಳ ಬಗ್ಗೆ ಮಾಹಿತಿಯನ್ನು ಒದಗಿಸಬಹುದು’ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.

    ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ದ.ಕ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಅರುಣ್ ಕುಮಾರ್, ಡ್ರಗ್ಸ್ ಚಟ ನಮ್ಮ ಚಿಂತನಾ ಸಾಮರ್ಥ್ಯ ಕುಗ್ಗಿಸಿ ಭಾವನಾರಹಿತ ಪ್ರಾಣಿಗಳನ್ನಾಗಿಸುತ್ತವೆ. ಮನೆಗಳಲ್ಲಿ ಪೋಷಕರು, ಶಾಲೆಗಳಲ್ಲಿ ಶಿಕ್ಷಕರು ತಮ್ಮ ಮಕ್ಕಳ ಡ್ರಗ್ಸ್ ಚಟುವಟಿಕೆಗಳ ಬಗ್ಗೆ ನಿಗಾವಹಿಸಿ ಪೊಲೀಸರಿಗೆ ಮಾಹಿತಿ ನೀಡಿದರೆ, ಈ ಪಿಡುಗನ್ನು ನಿಯಂತ್ರಿಸಲು ಸಾಧ್ಯವಾಗಲಿದೆ. ಸಾರ್ವಜನಿಕ ರಿಂದಲೂ ಈ ನಿಟ್ಟಿನಲ್ಲಿ ಪೊಲೀಸರಿಗೆ ಸಹಕಾರ ದೊರೆಯಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಮಂಗಳೂರು ಅಪರಾದ ಮತ್ತು ಟ್ರಾಫಿಕ್ ಉಪ ಆಯುಕ್ತರಾದ ಸಿದ್ದಾರ್ಥ್ ಗೋಯಲ್, ಉಪ ಪೊಲೀಸ್ ಆಯುಕ್ತರಾದ ಕೆ. ರವಿಶಂಕರ್, ಸಿಆರ್ ವಿಭಾಗದ ಉಪ ಪೊಲೀಸ್ ಆಯುಕ್ತ ಉಮೇಶ್ ಪಿ, ಕೆಎಸ್ ಹೆಗ್ಡೆ ವೈಧ್ಯಕೀಯ ಅಕಾಡೆಮಿ ಉಪನ್ಯಾಸಕಿ ಮನೋವೈಧ್ಯಕೀಯ ಸಮಾಜ ಸೇವಕಿ ಅಗ್ನಿತಾ ಐವನ್ ಮತ್ತಿತ್ತರರು ಉಪಸ್ಥಿತರಿದ್ದರು.

    Post Views: 155

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.