Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು:‘ಎಂಡಿಎಂಎ’ನ ಕುಖ್ಯಾತ ಡ್ರಗ್ ಪೆಡ್ಲರ್​ಗಳು ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು:‘ಎಂಡಿಎಂಎ’ನ ಕುಖ್ಯಾತ ಡ್ರಗ್ ಪೆಡ್ಲರ್​ಗಳು ಸೆರೆ

    August 28, 2023
    Share

    ಮಂಗಳೂರು: ಮಾದಕ ವಸ್ತು ‘ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್‌ನ ಶಾಕೀಬ್ ಯಾನೆ ಶಬ್ಬು (33), ಚೊಕ್ಕಬೆಟ್ಟು 8ನೇ ಬ್ಲಾಕ್‌ನ ನಿಸಾರ್ ಹುಸೈನ್ ಯಾನೆ ನಿಚ್ಚು (34) ಬಂಧಿತ ಆರೋಪಿಗಳು. ಇವರಿಂದ ಒಟ್ಟು 52 ಗ್ರಾಂ ತೂಕದ 2,60,000 ರೂ.ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕಾರು, 2 ಮೊಬೈಲ್ ಫೋನು, ನಗದು 1,800 ರೂ., ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 7,83,300 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ ಕಾರಿನಲ್ಲಿ ಇಬ್ಬರು ಅಕ್ರಮವಾಗಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದೆ. ಆರೋಪಿಗಳ ಪೈಕಿ ಶಾಕೀಬ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೂರು ಕಳವು ಪ್ರಕರಣಗಳು, ಕೊಲೆ ಯತ್ನ ಪ್ರಕರಣ, ಹಲ್ಲೆ ಪ್ರಕರಣ, ಬಜ್ಪೆ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಬಂದರ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ, ಮೂಡುಬಿದಿರೆ ಠಾಣೆಯಲ್ಲಿ ಸರ ಕಳ್ಳತನ ಪ್ರಕರಣ, ಕಾರ್ಕಳ ನಗರ ಠಾಣೆ, ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವಾ ಠಾಣೆಗಳಲ್ಲಿ ಸರಕಳ್ಳತನ ಪ್ರಕರಣ, ಮಣಿಪಾಲದಲ್ಲಿ ದರೋಡೆ ಪ್ರಕರಣ ಹೀಗೆ ಒಟ್ಟು 13 ಪ್ರಕರಣಗಳು ದಾಖಲಾಗಿವೆ.

    ನ್ಯಾಯಾಲಯದಿಂದ ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹಾಗಾಗಿ ಈತನ ವಿರುದ್ಧ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು. ನಿಸಾರ್ ಹುಸೈನ್ ನಿಚ್ಚು ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಕೊಲೆಯತ್ನ ಪ್ರಕರಣ, ಬರ್ಕೆ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಹಾಗೂ ಕೊಲೆಯತ್ನ ಪ್ರಕರಣ, ಮುಲ್ಕಿ ಠಾಣೆಯಲ್ಲಿ ಕಳವು ಪ್ರಕರಣ, ಕದ್ರಿ ಠಾಣೆ, ಉಪ್ಪಿನಂಗಡಿ, ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಗಟ್ಟಿ ದರೋಡೆ ನಡೆಸಿದ 3 ಪ್ರಕರಣಗಳು, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ಹೀಗೆ 9 ಪ್ರಕರಣಗಳು ದಾಖಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 7 ವಾರಂಟ್ ಜಾರಿಯಲ್ಲಿದೆ. ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆಯಲ್ಲಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಕೂಡಾ ಈತ ಭಾಗಿಯಾಗಿದ್ದು, ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 223

    Related Posts

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.