Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಡ್ರಗ್ ಪೆಡ್ಲಿಂಗ್ ಜಾಲ ಪತ್ತೆ- ಐವರು ಕಾಲೇಜು ವಿದ್ಯಾರ್ಥಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಡ್ರಗ್ ಪೆಡ್ಲಿಂಗ್ ಜಾಲ ಪತ್ತೆ- ಐವರು ಕಾಲೇಜು ವಿದ್ಯಾರ್ಥಿಗಳ ಬಂಧನ

    April 9, 2026
    Share

    ಮಂಗಳೂರು: ನಗರದಲ್ಲಿ ಶೈಕ್ಷಣಿಕ ಹಂತದಲ್ಲೇ ಮಾದಕ ದ್ರವ್ಯ ಜಾಲ ವಿಸ್ತರಿಸುತ್ತಿರುವ ಆತಂಕಕಾರಿ ಬೆಳವಣಿಗೆಯೊಂದು ಬೆಳಕಿಗೆ ಬಂದಿದೆ. ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಐವರು ಕಾಲೇಜು ವಿದ್ಯಾರ್ಥಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

    ವಿದ್ಯಾರ್ಥಿಯೊಬ್ಬನ ಬಳಿ ಸಣ್ಣ ಪ್ರಮಾಣದ ಗಾಂಜಾ ಪೊಟ್ಟಣ ಪತ್ತೆಯಾದ ಹಿನ್ನೆಲೆಯಲ್ಲಿ ಆತನ ಪೋಷಕರು ನೀಡಿದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ತನಿಖೆಯ ವೇಳೆ ಈ ವಿದ್ಯಾರ್ಥಿಯ ಹಿಂದೆ ಐವರು ವಿದ್ಯಾರ್ಥಿಗಳ ದೊಡ್ಡ ಪೆಡ್ಲಿಂಗ್ ಜಾಲವೇ ಇರುವುದು ದೃಢಪಟ್ಟಿದೆ.

    ಬಂಧಿತ ವಿದ್ಯಾರ್ಥಿಗಳು ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಾಸ್ಟೆಲ್‌ಗಳ ಬದಲಾಗಿ ಪ್ರತ್ಯೇಕವಾಗಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದರು. ಇದೇ ಕೊಠಡಿಯನ್ನು ಕೇಂದ್ರವಾಗಿಸಿಕೊಂಡು ಗಾಂಜಾವನ್ನು ಸಣ್ಣ ಪೊಟ್ಟಣಗಳನ್ನಾಗಿ ಮಾಡಿ ಗ್ರಾಹಕರಿಗೆ ಸರಬರಾಜು ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

    ಆರು ವಿವಿಧ ಕಾಲೇಜುಗಳ ಸುಮಾರು 40 ವಿದ್ಯಾರ್ಥಿಗಳು ಹಾಗೂ ಇತರ 10 ಮಂದಿ ಇವರಿಂದ ಗಾಂಜಾ ಖರೀದಿಸುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.

    ಮಕ್ಕಳ ವರ್ತನೆಯಲ್ಲಿ ಸಣ್ಣ ಬದಲಾವಣೆ ಕಂಡರೂ ಪೋಷಕರು ಎಚ್ಚೆತ್ತುಕೊಳ್ಳಬೇಕು. ವಿಶೇಷವಾಗಿ ಮಕ್ಕಳು ಹಾಸ್ಟೆಲ್‌ ಬಿಟ್ಟು ಬಾಡಿಗೆ ಕೊಠಡಿಗಳಲ್ಲಿ ಉಳಿದುಕೊಂಡಾಗ ಪೋಷಕರು ಮತ್ತು ಕಾಲೇಜು ಆಡಳಿತ ಮಂಡಳಿ ಅವರ ಮೇಲೆ ನಿಗಾ ಇಡುವುದು ಅತ್ಯಗತ್ಯ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮನವಿ ಮಾಡಿದ್ದಾರೆ.

    Post Views: 153

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.