Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣ-ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣ-ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ

    September 2, 2025
    Share

    ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

    ಬಂಧಿತರನ್ನು ಬಿಹಾರ ರಾಜ್ಯದ ಹರ್ಷ ಕುಮಾರ್ (22) ಮತ್ತು ಅಮರ್ ಕುಮಾರ (28) ಎಂದು ಗುರುತಿಸಲಾಗಿದೆ.

    ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪಿಎಸ್ಐ ಜ್ಞಾನಶೇಖರರವರಿಗೆ ಬಾತ್ಮೀದಾರರಿಂದ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ನಗರ ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತಕರಾದ ಶ್ರೀಕಾಂತ್ ಕೆ ರವರ ನಿರ್ದೆಶನದಂತೆ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ರವರ ನೇತೃತ್ವದಲ್ಲಿ ಜ್ಞಾನಶೇಖರ ರವರು ತಮ್ಮ ಸಿಬ್ಬಂದಿಗಳ ಆರೋಪಿತರಾದ ಬಿಹಾರ ರಾಜ್ಯದ ಹರ್ಷ ಕುಮಾರ್ ಎಂಬಾತನಿಂದ 1 ಕೆ ಜಿ 230 ಗ್ರಾಂ ಮತ್ತು ಅಮರ್ ಕುಮಾರ್ ಎಂಬಾತನಿಂದ 80 ಗ್ರಾಂ ಗಾಂಜಾ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದು, ಇದರ ಮೌಲ್ಯ ಸುಮಾರು 75,000/- ರೂಪಾಯಿಗಳಷ್ಟು ಆಗಿರುತ್ತದೆ.

    ಆರೋಪಿತರು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುವ ಸಲುವಾಗಿ ಉಪಯೋಗಿಸುತ್ತಿದ್ದ ೦2 ಮೊಬೈಲ್ಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಗಳ ಪೈಕಿ ಒಬ್ಬಾತನು ಬಿಹಾರದ ಪಟ್ನಾದಲ್ಲಿ ಮೀಶೋ ಮತ್ತು ಫ್ಲಿಫ್ ಕಾರ್ಟ್ ಹಬ್ ನಲ್ಲಿ ಮತ್ತು ಇನ್ನೊಬ್ಬಾತ ದೆಹಲಿಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿರುವುದಾಗಿದೆ.

    ಆರೋಪಿಗಳ ವಿರುದ್ದ ಪಣಂಬೂರು ಪೊಲೀಸ್ ಠಾಣಾ ಅ.ಕ್ರ ನಂಬ್ರ 75/2025 ಕಲಂ: 8(c), 20(b)(ii)(B) ಎನ್ ಡಿಪಿಎಸ್ ಕಾಯ್ದೆ ರಂತೆ ಪ್ರಕರಣ ದಾಖಲಾಗಿರುತ್ತದೆ.

    Post Views: 114

    Related Posts

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.