Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಬಂಧನ

    December 23, 2022
    Share

    ಮಾದಕ ನಿದ್ರಾಜನಕ ವಸ್ತುವಾದ ಎಂ.ಡಿ.ಎಂ.ಎ. ಸಾಗಾಟ ಮಾಡುತ್ತಿದ್ದ ಪ್ರಕರಣವೊಂದರಲ್ಲಿ ಗುರುವಾರ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರನ್ನು ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಬಳಿ ಗೂಡಿನಬಳಿಗೆ ಹೋಗುವ ರಸ್ತೆಯಲ್ಲಿ ಬಂಧಿಸಿದ್ದಾರೆ.

    ಬಿಕಸ್ಟಾ ಗ್ರಾಮದ ಬಾರೆಕಾಡು ನಿವಾಸಿ ಇರ್ಷಾದ್ (25) ಮತ್ತು ಕಾಸರಗೋಡು ಮಂಜೇಶ್ವರ ತಾಲೂಕಿನ ದೀಕ್ಷಿತ್ ಯಾನೆ ಅಪ್ಪೂಸ್ (19) ಎಂಬಿಬ್ಬರು ಬಂಧಿತರು. ಬಂಟ್ವಾಳ ನಗರ ಠಾಣಾಧಿಕಾರಿ ಅವಿನಾಶ್ ಅವರು ಸಿಬ್ಬಂದಿ ಜೊತೆ ಗಸ್ತಿನಲ್ಲಿದ್ದ ವೇಳೆ ಸಂಜೆ ಸುಮಾರು ಸಂಜೆ 5 ಗಂಟೆಯ ವೇಳೆಗೆ ಬಿ,ಮೂಡ ಗ್ರಾಮದ ಗೂಡಿನಬಳಿಗೆ ಹೋಗುವ ರಸ್ತೆಯಲ್ಲಿ ವಾಹನಗಳನ್ನು ತಪಾಸಣೆ ಮಾಡಿಕೊಂಡಿರುವಾಗ ನಾರಾಯಣಗುರು ವೃತ್ತದ ಕಡೆಯಿಂದ ಬಂದ ಆರೋಪಿಗಳಿಬ್ಬರು ಪ್ರಯಾಣಿಸುತ್ತಿದ್ದ ಆಟೋರಿಕ್ಷಾವನ್ನು ನಿಲ್ಲಿಸಲು ಸೂಚಿಸಿ ದಾಖಲಾತಿ ಕೇಳಿದಾಗ ಚಾಲಕನ ವರ್ತನೆಯಲ್ಲಿ ಅನುಮಾನ ಕಂಡು ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭ ಎಂಡಿಎಂಎ ನಿದ್ರಾಜನಕ ಸೊತ್ತನ್ನು ಸೇವಿಸಿರುವುದು ಗಮನಕ್ಕೆ ಬಂದಿದೆ. ಇರ್ಷಾದ್ ಬಳಿಯಿಂದ 4 ಗ್ರಾಮ್ ತೂಕ ಹಾಗೂ ದೀಕ್ಷಿತ್ ಬೆಳೆಯಿಂದ 5 ಗ್ರಾಮ್ ತೂಕದ ನಿದ್ರಾಜನಕ ಸೊತ್ತಾದ ಎಂಡಿಎಂಎ ಮಾತ್ರೆ ಇದ್ದು, ಸುಮಾರು 20 ಸಾವಿರ ಮೌಲ್ಯದ್ದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಎಂಡಿಎಂಎ ಸೊತ್ತು ಹಾಗೂ ರಿಕ್ಷಾಸಹಿತ ಬಂಧಿಸಿ ಪ್ರಕರಣ ದಾಖಲಿಸಲಾಯಿತು.

    Post Views: 200

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.