ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 7 ಡಿವೈಎಸ್ಪಿ ಹಾಗೂ 14 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸಿಐಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಡಿವೈಎಸ್ಪಿ ಗಿರೀಶ್ ಎಸ್ ಬಿ ಅವರನ್ನು ಸುಬ್ರಹ್ಮಣ್ಯಪುರ ಉಪ ವಿಭಾಗ, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಲೋಕಾಯುಕ್ತ ಡಿವೈಎಸ್ಪಿಯಾಗಿದ್ದಂತ ಜೋಗಿನ ಗೋಪಾಲ ದೊಡ್ಡಕರಿಯಪ್ಪ ಅವರನ್ನು ಬೆಂಗಳೂರಿನ ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.
ಸಿಟಿಎಸ್ಬಿಯಲ್ಲಿದ್ದಂತ ಧರ್ಮೇಂದ್ರ ಹೆಚ್ ಎನ್ ಅವರನ್ನು ಬೆಂಗಳೂರಿನ ಸಿಸಿಬಿಗೆ, ರಾಜ್ಯ ಗುಪ್ತವಾರ್ತೆಯ ಡಿವೈಎಸ್ಪಿ ಸತ್ಯನಾರಾಯಣ ಸಿಂಗ್ ಎಸ್ ಬಿ ಅವರನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ, ಸಣ್ಣ ತಮ್ಮಯ್ಯ ಅವರನ್ನು ಹುಬ್ಬಳ್ಳಿ-ಧಾರವಾಡ ನಗರ ಸಿಸಿಬಿ ಡಿವೈಎಸ್ವಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಸಿಸಿಬಿಯಲ್ಲಿದ್ದಂತ ಡಿವೈಎಸ್ಪಿ ಪುಟ್ಟಸ್ವಾಮಿಗೌಡ.ಟಿಆರ್ ಅವರನ್ನು ಆಂತರಿಕ ಭದ್ರತಾ ವಿಭಾಗ, ಸುಬ್ರಹ್ಮಣ್ಯಪುರ ಉಪ ವಿಭಾಗದ ಡಿವೈಎಸ್ಪಿ ಪವನ್ ಎನ್ ಅವರನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.