Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘LPG ಗ್ಯಾಸ್ ಗ್ರಾಹಕ’ರೇ ಗಮನಿಸಿ: ‘E-KYC’ ಮಾಡಿಸಿದರೆ ಮಾತ್ರ ‘ಸಬ್ಸಿಡಿ ವದಂತಿ’ಗೆ ಕಿವಿಗೊಡದಿರಿ
    ಇತ್ತೀಚಿನ ಸುದ್ದಿ

    ‘LPG ಗ್ಯಾಸ್ ಗ್ರಾಹಕ’ರೇ ಗಮನಿಸಿ: ‘E-KYC’ ಮಾಡಿಸಿದರೆ ಮಾತ್ರ ‘ಸಬ್ಸಿಡಿ ವದಂತಿ’ಗೆ ಕಿವಿಗೊಡದಿರಿ

    January 1, 2024
    Share

    ಬೆಂಗಳೂರು: ಅಡುಗೆ ಅನಿಲ ಸಂಪರ್ಕ ಹೊಂದಿರುವ (LPG Gas ) ಫಲಾನುಭವಿಗಳು, ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಎಂಬ ವದಂತಿಗೆ ಕಿವಿಗೊಡದಿರಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ.

    ಡಿ.31ರ ಒಳಗಾಗಿ ಗ್ಯಾಸ್ ಏಜೆನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಹಾಗೂ ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ ಎನ್ನುವ ವದಂತಿ ಮತ್ತು ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕೆಂಬ ವದಂತಿ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿರುತ್ತದೆ. ಜಿಲ್ಲೆಯಲ್ಲಿ ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಬಯೋಮೆಟ್ರಿಕ್ ನೀಡಲು ಕೇಂದ್ರ ಸರ್ಕಾರವು ಯಾವುದೇ ರೀತಿಯ ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಬಯೋಮೆಟ್ರಿಕ್ ನೀಡಬಹುದಾಗಿದೆ ಅಂತ ಹೇಳಿದ್ದಾರೆ.

    ಜಿಲ್ಲೆಯ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ಅನಾವಶ್ಯಕ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ. ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ ಹೊಂದಿರುವವರು ಆಧಾರ್ ಸಂಖ್ಯೆ ದಾಖಲಾತಿಯೊಂದಿಗೆ ಸಂಬಂಧಿಸಿದ ಗ್ಯಾಸ್ ಏಜೆನ್ಸಿಗೆ ತೆರಳಿ ಇ-ಕೆವೈಸಿ ನೀಡಬಹುದಾಗಿದೆ. ಇ-ಕೆವೈಸಿ ಉಚಿತವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಅಡುಗೆ ಅನಿಲ ಗ್ಯಾಸ್ ಬಳಕೆದಾರರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 229

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.