Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು:ಪರಿಸರ ಸ್ನೇಹಿ ಚೌತಿ ಹಬ್ಬ ಆಚರಿಸಿ – ದ.ಕ. ಡಿಸಿ ಸೂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು:ಪರಿಸರ ಸ್ನೇಹಿ ಚೌತಿ ಹಬ್ಬ ಆಚರಿಸಿ – ದ.ಕ. ಡಿಸಿ ಸೂಚನೆ

    September 15, 2023
    Share

    ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣೇಶೋತ್ಸವ ಶಾಂತಿಯುತ ವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಂಘಟ ಕರಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಗಣೇಶೋತ್ಸವ ಸಂದರ್ಭ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅಧಿಕಾರಿಗಳು ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಪಿಒಪಿಯಿಂದ ತಯಾರಿಸಿದ ಗಣೇಶನ ಮೂರ್ತಿಗಳನ್ನು ಯಾವುದೇ ಕಾರಣಕ್ಕೂ ಬಳಸಲು ಅವಕಾಶವಿಲ್ಲ. ಉಳಿದಂತೆ ಶಬ್ದ ಮಾಲಿನ್ಯವಾಗದಂತೆ ಕ್ರಮ ವಹಿಸುವುದು, ಗಣೇಶೋತ್ಸವದ ಸಂದರ್ಭ ಹೆಚ್ಚು ಜನ ಸೇರುವಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ, ಆ್ಯಂಬುಲೆನ್ಸ್‌ ಗಳು ಸನ್ನದ್ಧವಾಗಿರುವಂತೆ ಹಾಗೂ ವಿಸರ್ಜನೆ ಸಂದರ್ಭ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಈ ಸಂದರ್ಭ ಪ್ರತಿಕ್ರಿಯಿಸಿ, ಜಿಲ್ಲೆ ಯಲ್ಲಿ ಸಾರ್ವಜನಿಕವಾಗಿ ಗರಿಷ್ಠ 6.5 ಅಡಿ ಎತ್ತರದವರೆಗಿನ ಗಣೇಶ ಮೂರ್ತಿಗಳನ್ನು ಪೂಜಿಸಲಾಗುತ್ತಿದ್ದು, ಮಣ್ಣಿನಿಂದಲೇ ಈ ವಿಗ್ರಹಗಳನ್ನು ತಯಾರಿಸಲಾಗುತ್ತದೆ ಎಂದರು ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್‌ ಮಾತನಾಡಿ, ಜಿಲ್ಲೆಯಲ್ಲಿ ಹಲವು ವರ್ಷಗಳಿಂದಲೂ ಸಾರ್ವಜನಿಕವಾಗಿ ಪಿಒಪಿ ಗಣಪನ ಮೂರ್ತಿಗಳನ್ನು ಬಳಸು ವುದು ಕಂಡು ಬಂದಿಲ್ಲ. ಹಾಗಿದ್ದರೂ ಸ್ಥಳೀಯಾಡಳಿತ ಈ ಬಗ್ಗೆ ನಿಗಾ ವಹಿಸುತ್ತಿವೆ ಎಂದರು. ಗಣೇಶೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ಬಳಸುವ ವಾಹನಗಳು ಕಾರ್ಯಕ್ಷಮತೆಯನ್ನು ಪ್ರಾದೇಶಿಕ ಸಾರಿಗೆ ಇಲಾಖೆಯವರು ದೃಢೀಕರಿಸಿಕೊಳ್ಳುವಂತೆ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸಲಹೆ ನೀಡಿದರು. ನೇತ್ರಾವತಿ, ಫಲ್ಗುಣಿ ಸೇರಿದಂತೆ ನಾನಾ ನದಿ, ಕೆರೆಗಳಲ್ಲಿ ಗಣಪತಿ ವಿಸರ್ಜನೆ ಮಾಡುವಲ್ಲಿ ಬೋಟ್, ಸುವ್ಯವಸ್ಥಿತ ಲೈಟಿಂಗ್, ಲೈಫ್ ಜಾಕೆಟ್, ಅಗ್ನಿ ಸುರಕ್ಷತೆ ಸೇರಿದಂತೆ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು ಈ ಹಿಂದಿನಂತೆಯೇ ದ.ಕ. ಜಿಲ್ಲೆಯಲ್ಲಿ ಶಾಂತಿ ಹಾಗೂ ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಎಲ್ಲರೂ ಸಹಕರಿಸಬೇಕು. ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಗಳಿಗೆ ಏಕಗವಾಕ್ಷಿ(ಸಿಂಗಲ್ ವಿಂಡೋ) ಯಡಿ ಅನುಮತಿ ನೀಡಬೇಕು. ಉತ್ಸವಕ್ಕೆ ಸಂಘಟಕರು ಗ್ರಾಮೀಣ ಭಾಗದಲ್ಲಾದರೆ ಗ್ರಾಮ ಪಂಚಾಯತ್‌ ಅಥವಾ ಸ್ಥಳೀಯ ಸಂಸ್ಥೆಗಳು, ನಗರ ಭಾಗದಲ್ಲಾದರೆ ಮಹಾನಗರಪಾಲಿಕೆಗೆ ಅರ್ಜಿ ಸಲ್ಲಿಸಬೇಕು. ಧ್ವನಿವರ್ಧಕ ಅಳವಡಿಕೆಗೆ ಆಯಾಯ ಪೊಲೀಸ್‌ ಠಾಣೆಗಳು ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು. ಸಭೆಯಲ್ಲಿ ಜಿಪಂ ಸಿಇಒ ಡಾ. ಆನಂದ್‌, ಮನಪಾ ಆಯುಕ್ತ ಆನಂದ್, ಡಿಸಿಪಿ ಸಿದ್ಧಾರ್ಥ್ ಗೋಯಲ್ ಮತ್ತಿತರರು ಉಪಸ್ಥಿತರಿದ್ದರು.

    Post Views: 162

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.