Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ವಿಶ್ವವಿದ್ಯಾಲಯದ ಮೇಲೆ ಇಡಿ ಅಧಿಕಾರಿಗಳ ದಾಳಿ
    ಇತ್ತೀಚಿನ ಸುದ್ದಿ

    ಮಂಗಳೂರು ವಿಶ್ವವಿದ್ಯಾಲಯದ ಮೇಲೆ ಇಡಿ ಅಧಿಕಾರಿಗಳ ದಾಳಿ

    January 20, 2024
    Share

    ಮಂಗಳೂರು: ಕೋಚಿಮುಲ್ ನೇಮಕಾತಿಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ಪ್ರಶ್ನೆಪತ್ರಿಕೆ ಮಾರಾಟ ಶಂಕೆ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಮಂಗಳೂರು ವಿಶ್ವವಿದ್ಯಾಲಯದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿರುವ ಇಡಿ ಅಧಿಕಾರಿಗಳು ಎರಡು ದಿನಗಳ ಕಾಲ ಪರಿಶೀಲನೆ ನಡೆಸಿದ್ದಾರೆ.

    ಕಳೆದ 6 ತಿಂಗಳ ಹಿಂದೆಯೇ ನಡೆದಿದ್ದ ನೇಮಕಾತಿಗೆ ಪರೀಕ್ಷೆ, ಫಲಿತಾಂಶ ಪ್ರಕಟ ಹೊಣೆಯನ್ನು ಮಂಗಳೂರು ವಿವಿ ಹೊತ್ತಿತ್ತು. ಈ ಹಿನ್ನೆಲೆಯಲ್ಲಿ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ಅವರನ್ನು ವಿಚಾರಣೆ ಮಾಡಲಾಗುತ್ತಿದೆ.

    ನೇಮಕಾತಿ ಪರೀಕ್ಷೆಯ ಜವಾಬ್ದಾರಿ ವಹಿಸಿಕೊಂಡಿದ್ದ ಪ್ರೊ.ರಾಜುಕೃಷ್ಣ ಪರೀಕ್ಷೆಗೂ ಮುನ್ನ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಮಂಗಳೂರು ವಿವಿ ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ತಿಂಗಳ ಹಿಂದೆಯೇ ಕುಲಸಚಿವರಿಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇದೀಗ ವಿವಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

    Post Views: 225

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.