ಕಡಬ: ಮೊಟ್ಟೆ ಸಾಗಾಟ ಲಾರಿಯೊಂದು ಚಾಲನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಮೊಟ್ಟೆಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ.
ಘಟನೆಯಲ್ಲಿ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಮೈಸೂರಿನಿಂದ ನೆಟ್ಟಣಕ್ಕೆ ಮೊಟ್ಟೆ ತಲುಪಿಸಿ ಉಳಿದ ಮೊಟ್ಟೆಗಳನ್ನು ಪುತ್ತೂರಿಗೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.