Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಪಾಲಿಕೆ 23ನೇ ಅವಧಿಯ ಮೇಯರ್ ಚುನಾವಣೆ ದಿನಾಂಕ ನಿಗದಿ
    ಇತ್ತೀಚಿನ ಸುದ್ದಿ

    ಮಂಗಳೂರು ಪಾಲಿಕೆ 23ನೇ ಅವಧಿಯ ಮೇಯರ್ ಚುನಾವಣೆ ದಿನಾಂಕ ನಿಗದಿ

    August 27, 2022
    Share

    ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಸೆ. 9ರಂದು ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದೆ. ಇನ್ನು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.

    ಕಳೆದ ಮಾರ್ಚ್‌ 2ರಂದು ನಡೆಯಬೇಕಾಗಿದ್ದ ಚುನಾವಣೆಯು ಸುಪ್ರೀಂ ಕೋರ್ಟ್‌ ಆದೇಶವೊಂದರ ಗೊಂದಲದಿಂದ ಮುಂದೂಡಿಕೆಯಾಗಿತ್ತು. ಹೀಗಾಗಿ ಒಂದು ವರ್ಷ ಅವಧಿ ಪೂರ್ಣಗೊಳಿಸಿದ್ದ ಪ್ರೇಮಾನಂದ ಶೆಟ್ಟಿ ಅವರೇ ಮೇಯರ್ ಸ್ಥಾನದಲ್ಲಿ ಹಾಗೂ ಸುಮಂಗಳಾ ರಾವ್ ಉಪಮೇಯರ್ ಸ್ಥಾನದಲ್ಲಿ ಮುಂದುವರಿದಿದ್ದರು. ಹಾಲಿ ಮೇಯರ್ ಅವಧಿ ಮುಂದುವರಿದಿರುವ ಕಾರಣ ಹಾಲಿ ಬಿಜೆಪಿ ಆಡಳಿತದ ಕೊನೆಯ ಮೇಯರ್ ಅವರ ಅಧಿಕಾರವಧಿ ಅಷ್ಟು ದಿನ ಕಡಿತವಾಗಲಿದೆ. 23ನೇ ಅವಧಿಗೆ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾತಿ ನಿಗದಿಯಾಗಿತ್ತು. ಈ ನಡುವೆ ಆಗಸ್ಟ್ 24ರಂದು ಪಾಲಿಕೆಯ 24ನೇ ಅವಧಿಯ ಮೀಸಲಾತಿ ಪ್ರಕಟಗೊಂಡಿದೆ. ಮೇಯರ್‌ ಸ್ಥಾನ ಸಾಮಾನ್ಯ, ಉಪಮೇಯರ್ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ನಿಗದಿಯಾಗಿದೆ. ಮಹಾನಗರ ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್‌ 14 ಹಾಗೂ ಎಸ್‌ಡಿಪಿಐ ಎರಡು ಸ್ಥಾನಗಳನ್ನು ಹೊಂದಿವೆ.

    Post Views: 219

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.