Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಲೆಕ್ಟ್ರಿಕ್ ಅಟೋರಿಕ್ಷಾಗಳ‌ ಮುಕ್ತ ಸಂಚಾರಕ್ಕೆ ದ.ಕ. ಜಿಲ್ಲಾಧಿಕಾರಿ ಅನುಮತಿ
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಲೆಕ್ಟ್ರಿಕ್ ಅಟೋರಿಕ್ಷಾಗಳ‌ ಮುಕ್ತ ಸಂಚಾರಕ್ಕೆ ದ.ಕ. ಜಿಲ್ಲಾಧಿಕಾರಿ ಅನುಮತಿ

    August 7, 2024
    Share

    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥೆನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ.

    ಈ ನಿಟ್ಟಿನಲ್ಲಿ ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ ಹಳದಿ ಬಣ್ಣದ ಸ್ಟಿಕ್ಕರ್ ಅಥವಾ ಗುರುತಿನ ಸಂಖ್ಯೆಗಳನ್ನು ಪೋಲೀಸ್ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳ ದಿನಾಂಕ 24-11-2022ರ ಅಧಿಸೂಚನೆ ಮತ್ತು 23-01-2023 ರ ಮಾರ್ಪಾಡು ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ.

    ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ. ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.

    ಮೋಟಾರು ವಾಹನ ಕಾಯಿದೆಯಂತೆ ಪಾರ್ಕಿಂಗ್ ಸ್ಥಳಗಳನ್ನು ಮತ್ತು ನಿಲುಗಡೆ ನಿಲ್ದಾಣಗಳಿಗೆ ಸ್ಥಳಗಳನ್ನು ನಿರ್ಧರಿಸಲು ಮಂಗಳೂರು ನಗರದಲ್ಲಿ ಮಹಾನಗರಪಾಲಿಕೆ ಆಯುಕ್ತರು ಹಾಗೂ ಇತರೆ ಪ್ರದೇಶಗಳಲ್ಲಿ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಅಧಿಕಾರ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.