ಸುಳ್ಯ: ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ಬಳಿಕ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ.
ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತಪಟ್ಟವರು ಎಂದು ತಿಳಿದುಬಂದಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಅನ್ನು ತುಳಿದು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಹಸು ಮೇಯಿಸುವಾಗ ಜಮೀನಿನಲ್ಲಿ ಹೃದಯಾಘಾತವಾಗಿ ಯುವಕ ಸಾವು ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.




