Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಸೈಬರ್ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ. ವಂಚನೆ
    ಇತ್ತೀಚಿನ ಸುದ್ದಿ

    ಉಡುಪಿ: ಸೈಬರ್ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ. ವಂಚನೆ

    July 18, 2026
    Share

    ಉಡುಪಿ: ಸೈಬರ್ ಕ್ರೈಮ್, ಜಾರಿ ನಿರ್ದೇಶನಾಲಯ (ಇ.ಡಿ.) ಹಾಗೂ ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಿದ ವಂಚಕರು, ಉಡುಪಿ ತಾಲೂಕಿನ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಂದ 22 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.

    ಉಡುಪಿ ತಾಲೂಕಿನ ನಿವಾಸಿ ಹಾಗೂ ನಿವೃತ್ತ ಬ್ಯಾಂಕ್ ಉದ್ಯೋಗಿ ಜಯಕರ ಕಾಮತ್ ಪಿ. (76) ಅವರು ನೀಡಿದ ದೂರಿನ ಪ್ರಕಾರ, ಜುಲೈ 10ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಅವರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ವಾಟ್ಸಾಪ್ ವಿಡಿಯೊ ಕರೆ ಬಂದಿದೆ.

    ಕರೆ ಸ್ವೀಕರಿಸಿದ ವೇಳೆ ಪೊಲೀಸ್ ಸಮವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬ, ತಾನು ಮುಂಬೈನ ಕೊಲಾಬಾ ಸೈಬರ್ ಕ್ರೈಮ್ ವಿಭಾಗದ ಅಧಿಕಾರಿಯೆಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ, ಜಯಕರ ಕಾಮತ್ ಅವರ ಹೆಸರಿನಲ್ಲಿ ಮುಂಬೈನ ಕೆನರಾ ಬ್ಯಾಂಕ್‌ನಲ್ಲಿ ಖಾತೆಯಿದ್ದು, ಆ ಖಾತೆಯ ಮೂಲಕ ನೂರಾರು ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆಯಾಗಿರುವುದಾಗಿ ಹೇಳಿ, ಬ್ಯಾಂಕ್ ಖಾತೆ ಹಾಗೂ ಎಟಿಎಂ ಕಾರ್ಡ್ ವಿವರಗಳನ್ನು ಕೇಳಿದ್ದಾನೆ.

    ಜುಲೈ 11ರಿಂದ 16ರವರೆಗೆ ಒಂದೇ ಮೊಬೈಲ್ ಸಂಖ್ಯೆಯಿಂದ ಪದೇ ಪದೇ ವಾಟ್ಸಾಪ್ ಕರೆ ಮಾಡಿ, ತಾವು ಎಡಿಜಿಪಿ ವಿಶ್ವಾಸ್, ಇ.ಡಿ. ಅಧಿಕಾರಿ ಅನಿಲ್ ಕುಮಾರ್ ಹಾಗೂ ಸೈಬರ್ ಕ್ರೈಮ್ ಅಧಿಕಾರಿಗಳು ಎಂದು ನಂಬಿಸಿದ್ದಾರೆ. ‘ಫಂಡ್ ವೆರಿಫಿಕೇಷನ್’ ಹೆಸರಿನಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಆರ್‌ಟಿಜಿಎಸ್ ಮೂಲಕ ತಾವು ಸೂಚಿಸಿದ ಖಾತೆಗೆ ವರ್ಗಾಯಿಸುವಂತೆ ಸೂಚಿಸಿದ್ದು, ಆರೋಪಿಗಳ ಮಾತುಗಳನ್ನು ನಂಬಿದ ಜಯಕರ ಕಾಮತ್ ಅವರು ಒಟ್ಟು 22 ಲಕ್ಷ ರೂ. ಹಣವನ್ನು ಅವರು ತಿಳಿಸಿದ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದಾರೆ. ಬಳಿಕ ತಾವು ಸೈಬರ್ ವಂಚನೆಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಜಯಕರ ಕಾಮತ್ ಅವರು ನೀಡಿದ ದೂರಿನ ಮೇರೆಗೆ ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Post Views: 118

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.