ಬಂಟ್ವಾಳ: ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ.
ಮೇಗಿನಪೇಟೆ ನಿವಾಸಿ ಪ್ರಶಾಂತ್ ( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ.ಗ್ರೂಪ್ ನೌಕರರನಾಗಿ ಕೆಲಸ ಮಾಡುತ್ತಿದ್ದ ಈತ ಕೌಟುಂಬಿಕ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.
ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.