Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿದೇಶದಲ್ಲಿ ಉದ್ಯೋಗ, ವೀಸಾ ಕೊಡುವುದಾಗಿ ವಂಚನೆ: ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ವಿದೇಶದಲ್ಲಿ ಉದ್ಯೋಗ, ವೀಸಾ ಕೊಡುವುದಾಗಿ ವಂಚನೆ: ಆರೋಪಿ ಅರೆಸ್ಟ್

    April 7, 2023
    Share

    ಮಂಗಳೂರು: ವಿದೇಶದಲ್ಲಿ ಉದ್ಯೋಗ, ವೀಸಾ ಕೊಡಿಸುವುದಾಗಿ ಹೇಳಿಕೊಂಡು ಹಲವಾರು ಮಂದಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಸುಧೀರ್ ರಾವ್ ವಿ.ಆರ್.(42) ಎಂದು ಗುರುತಿಸಲಾಗಿದೆ. ಬಲ್ಗೇರಿಯಾ ದೇಶದಲ್ಲಿ ಉದ್ಯೋಗ-ವೀಸಾ ದೊರಕಿಸಿಕೊಡುವುದಾಗಿ ಹೇಳಿಕೊಂಡು 30ಕ್ಕೂ ಅಧಿಕ ಮಂದಿಯಿಂದ 50 ಲಕ್ಷ ರೂಪಾಯಿಗೂ ಅಧಿಕ ಹಣ ಪಡೆದು ಬಳಿಕ ವಂಚಿಸಿರುವ ಆರೋಪ ಈತನ ಮೇಲೆ ಇದೆ. ಈ ಬಗ್ಗೆ ಮೂಡಬಿದ್ರೆ ಮತ್ತು ಬಂಟ್ವಾಳ ನಗರ ಠಾಣೆಯಲ್ಲಿ 8 ಪ್ರಕರಣಗಳು ದಾಖಲಾಗಿವೆ.

    ಈ ಹಿಂದೆಯೂ ಸುಧೀರ್ ರಾವ್ ಕಾರು ಖರೀದಿಸುವ ಸಲುವಾಗಿ ನಕಲಿ ದಾಖಲೆ ಪತ್ರ ಸೃಷ್ಟಿಸಿ ಸೊಸೈಟಿಯಲ್ಲಿ ಅದನ್ನಿಟ್ಟು ಕಾರು ಖರೀದಿಸಿದ್ದ. ಬಳಿಕ ಕಂತು ಪಾವತಿಸದೆ ವಂಚಿಸಿದ್ದ. ಇದರಿಂದ ಜಾಮೀನು ನಿಂತವರು ಸಂಕಷ್ಟಕ್ಕೀಡಾಗಿದ್ದರು.

    ಈ ಬಗ್ಗೆ ಸುರತ್ಕಲ್‌ನಲ್ಲಿ 2, ಕದ್ರಿಯಲ್ಲಿ 2, ಕಂಕನಾಡಿ ನಗರ ಮತ್ತು ಪಾಂಡೇಶ್ವರ ಠಾಣೆಯಲ್ಲಿ ತಲಾ ಒಂದು ಸಹಿತ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ಆರೋಪಿಯು ಪ್ರಕರಣ ದಾಖಲಾದ ಬಳಿಕ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಈತನ ಇರುವಿಕೆಯ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರು ಮಾಹಿತಿ ಸಂಗ್ರಹಿಸಿ ಬಂಧಿಸಿದ್ದಾರೆ.

    Post Views: 230

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.