Facebook Twitter Instagram
    Tuesday, October 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್
    ಇತ್ತೀಚಿನ ಸುದ್ದಿ

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026
    Share

    ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಪರಿಸರ ಆಯೋಗದ ವತಿಯಿಂದ ಧರ್ಮಪ್ರಾಂತ್ಯದ ವ್ಯಾಪ್ತಿಯ 124 ಧರ್ಮಕ್ಷೇತ್ರಗಳಲ್ಲಿ ಆಯೋಜಿಸಲಾಗಿದ್ದ ‘ನಮ್ಮ ಉಳಿವಿಗಾಗಿ ಪ್ರತಿಜ್ಞಾ ಆಂದೋಲನ 2026’ ಪರಿಸರ ಜಾಗೃತಿ ಅಭಿಯಾನದಲ್ಲಿ 1,36,966 ಮಂದಿ ಭಾಗವಹಿಸಿದ್ದಾರೆ. ಅಭಿಯಾನದ ಸಮಾರೋಪ ಸಮಾರಂಭ ಅ. 25ರಂದು ಸುರತ್ಕಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.

    ಅಭಿಯಾನದ ಅಂಗವಾಗಿ ಪ್ರತಿಜ್ಞಾ ಪತ್ರಕ್ಕೆ ಸಹಿ ಹಾಕಿದವರ ಪೈಕಿ ಲಾಟರಿ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂ. ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಲಾಟರಿ ಮೂಲಕ ವಿಜೇತರನ್ನು ಆಯ್ಕೆ ಮಾಡಿದರು. ಕಣಚೂರು ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಹಾಗೂ ಪಂಜಿಮುಗೇರ್ ನಿವಾಸಿ ಅಬ್ದುಲ್ ರಝಿದ್ ಅವರು ಒಂದು ಲಕ್ಷ ರೂ. ನಗದು ಬಹುಮಾನಕ್ಕೆ ಆಯ್ಕೆಯಾದರು. ಅ. 26ರಂದು ಬಿಷಪ್ ನಿವಾಸದಲ್ಲಿ ಅವರಿಗೆ ಬಹುಮಾನ ಹಸ್ತಾಂತರಿಸಲಾಯಿತು.

    ಪರಿಸರ ಸಂರಕ್ಷಣೆಯ ಮಹತ್ವವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಈ ಅಭಿಯಾನದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವರ್ಗಗಳ ನಾಗರಿಕರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ, ಪ್ರಕೃತಿಯ ಸಂರಕ್ಷಣೆಗೆ ಪ್ರತಿಯೊಬ್ಬರೂ ವೈಯಕ್ತಿಕ ಹೊಣೆಗಾರಿಕೆಯಿಂದ ಕೈಜೋಡಿಸಬೇಕು ಎಂಬ ಸಂದೇಶವನ್ನು ಈ ಅಭಿಯಾನ ಸಾರಿದೆ.

    ಸಮಾರೋಪ ಸಮಾರಂಭದಲ್ಲಿ ಸುರತ್ಕಲ್ ಚರ್ಚ್‌ನ ಧರ್ಮಗುರು ವಂ. ಆಸ್ಟಿನ್ ಪೆರಿಸ್ ಹಾಗೂ ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರೊಯ್ ಕ್ಯಾಸ್ತೆಲಿನೊ ಉಪಸ್ಥಿತರಿದ್ದರು. ಪರಿಸರ ಆಯೋಗದ ಕಾರ್ಯದರ್ಶಿ ಹಾಗೂ ಕಾರ್ಯಕ್ರಮದ ಸಂಚಾಲಕ ಲುವಿ ಜೆ. ಪಿಂಟೊ ವಂದಿಸಿದರು. ಕ್ಲೆಮೆಂಟ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು. ಧರ್ಮಪ್ರಾಂತ್ಯದ ಯುವ ಆಯೋಗ ಮತ್ತು ಶೈಕ್ಷಣಿಕ ಆಯೋಗದ ಸದಸ್ಯರು ಅಭಿಯಾನದ ಯಶಸ್ಸಿಗೆ ಸಹಕರಿಸಿದರು.

    ಮಂಗಳೂರು ಧರ್ಮಪ್ರಾಂತ್ಯದ ಪರಿಸರ ಆಯೋಗವು ಪ್ರತಿವರ್ಷ ಪರಿಸರ ಜಾಗೃತಿ ಅಭಿಯಾನಗಳನ್ನು ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆಯ ಕುರಿತು ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.

    Post Views: 2

    Related Posts

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026

    ಉಡುಪಿ: ಗಾಜಿನ ಕಾರ್ಖಾನೆಯಲ್ಲಿ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

    October 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.