Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಂಚ ಪಡೆದು ಎಸ್ಕೇಪ್: 15 ಕಿಲೋ ಮೀಟರ್ ಚೇಸ್ ಮಾಡಿ ಹಿಡಿದ ಲೋಕಾಯುಕ್ತ ಪೊಲೀಸರು
    ಇತ್ತೀಚಿನ ಸುದ್ದಿ

    ಲಂಚ ಪಡೆದು ಎಸ್ಕೇಪ್: 15 ಕಿಲೋ ಮೀಟರ್ ಚೇಸ್ ಮಾಡಿ ಹಿಡಿದ ಲೋಕಾಯುಕ್ತ ಪೊಲೀಸರು

    July 15, 2023
    Share

    ಬೆಂಗಳೂರು: ಲಂಚ ಪಡೆದು ಎಸ್ಕೇಪ್ ಆಗುತ್ತಿದ್ದ ಅಧಿಕಾರಿಯನ್ನು ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿ ಲೋಕಾಯುಕ್ತ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ನೆಲಮಂಗಲ ಬಳಿಕ ಸೊಂಡೇಕೊಪ್ಪದಲ್ಲಿ ಈ ಘಟನೆ ನಡೆದಿದೆ. ರಂಗಧಾಮಯ್ಯ ಎನ್ನುವ ವ್ಯಕ್ತಿ ಕೆಜಿ ಸರ್ಕಲ್ ಬಳಿ ಇರುವ ತಾಲೂಕು ಕಚೇರಿಯಲ್ಲಿ ಫುಡ್ ಇನ್‌ಸ್ಪೆಕ್ಟರ್ ಆಗಿರುವ ಮಹಂತೇಗೌಡ ಬಳಿ ಟ್ರೇಡ್ ಲೈಸೆನ್ಸ್ ಮಾಡಿಸಲು ತೆರಳಿದ್ದರು. ಲೈಸೆನ್ಸ್ ಕೊಡಲು ಅಧಿಕಾರಿ 1 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಧಿಕಾರಿ ಲಂಚ ಕೇಳಿದ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಂತೇಗೌಡನನ್ನು ಬಲೆಗೆ ಬೀಳಿಸಲು ಲೋಕಾಯುಕ್ತ ಪೊಲೀಸರು ಬಲೆ ಬೀಸಿದ್ದರು. ಮುಂಗಡವಾಗಿ 43 ಸಾವಿರ ರೂಪಾಯಿ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಲಂಚ ಪಡೆಯುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಹಣ ಪಡೆಯುವ ಸಂದರ್ಭದಲ್ಲಿ ಮಹಂತೇಗೌಡ ಅವರನ್ನು ಬಂಧಿಸಲು ಯತ್ನಿಸಿದ್ದಾರೆ. ಟ್ಯ್ರಾಪ್‌ನಲ್ಲಿ ಸಿಕ್ಕಿಕೊಂಡಿರುವ ಬಗ್ಗೆ ಅನುಮಾನ ಬರುತ್ತಿದ್ದಂತೆ ಫುಡ್ ಇನ್‌ಸ್ಪೆಕ್ಟರ್ ಮಹಂತೇಗೌಡ ಪರಾರಿಯಾಗಲು ಯತ್ನಿಸಿದ್ದಾರೆ. ಹಣ ಪಡೆದು ತನ್ನ ಕಾರಿನಲ್ಲಿ ಸುಮಾರು 15 ಕಿಮೀ ತೆರಳಿದ್ದಾರೆ. ಅಧಿಕಾರಿಯನ್ನು ಬೆನ್ನಟ್ಟಿದ ಲೋಕಾಯುಕ್ತ ಪೊಲೀಸರು ಕೊನೆಗೆ ಮಹಾಂತೇಶನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಂತೇಗೌಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತಾನು ತಪ್ಪಿಸಿಕೊಳ್ಳಲು ಲೋಕಾಯುಕ್ತ ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿರುವ ಆರೋಪ ಕೂಡ ಕೇಳಿಬಂದಿದೆ. ಘಟನೆ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಲೋಕಾಯುಕ್ತ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಕೊಲೆ ಯತ್ನ ಪ್ರಕರಣ ಕೂಡ ದಾಖಲಿಸಲಾಗಿದೆ. ಸದ್ಯ ಮಹಾಂತೇಶ್ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದು ಆತನ ಭ್ರಷ್ಟಾಚಾರದ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. 

    Post Views: 253

    Related Posts

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.