Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ನೈತಿಕ ಪೊಲೀಸ್ ಗಿರಿ- ಮೂವರ ವಿರುದ್ಧ ಪ್ರಕರಣ ದಾಖಲು..!
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ನೈತಿಕ ಪೊಲೀಸ್ ಗಿರಿ- ಮೂವರ ವಿರುದ್ಧ ಪ್ರಕರಣ ದಾಖಲು..!

    August 24, 2023
    Share

    ಮೂಡುಬಿದಿರೆ: ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ  ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

    ಸಂಜಯ್, ಅಭಿಲಾಷ್ , ಪ್ರೇಮ್  ಪ್ರಕರಣ ದಾಖಲಾದ ಮೂವರು ಆರೋಪಿಗಳು ಎಂದು ಗುರುತಿಸಲಾಗಿದೆ.

    ಮೂಡುಬಿದಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಬೆಂಗಳೂರಿಗೆ ಹೋಗಲು ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಎದುರು ನಿಂತಿದ್ದಳು.

    ಅದೇ ಸಮಯದಲ್ಲಿ ಆಕೆಯ ಸಹಪಾಠಿ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಆಕೆಯೊಂದಿಗೆ ಮಾತನಾಡಿದ್ದಾನೆ ಎನ್ನಲಾಗಿದೆ.

    ಅನ್ಯ ಮತೀಯ ಯುವಕ ಹಿಂದೂ ಯುವತಿ ಜೊತೆ ಸಲುಗೆಯಿಂದ ಮಾತನಾಡಿದ್ದಾನೆ ಎಂದು ಕೆರಳಿದ ಗುಂಪೊಂದು ಯುವತಿ ಬಸ್ ಹತ್ತಿದ ಬಳಿಕ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ.

    ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

    ಬುಧವಾರ ಜಿಲ್ಲಾಧಿಕಾರಿಗಳು ಇಲ್ಲಿನ ತಾಲೂಕು ಕಚೇರಿಗೆ ಭೇಟಿ ನೀಡಿದ್ದು, ಈ ಸಂದರ್ಭ ಮುಸ್ಲಿಂ ಸೆಂಟ್ರಲ್ ಕಮಿಟಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕಾಗಿ ಆಗ್ರಹಿಸಿದೆ.

    ಸದ್ಯ ಈ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ತಾಕತ್ತು ಪ್ರದರ್ಶಿಸಲು ಮುಂದಾದ ಹಾಗೆ ಕಂಡು ಬರ್ತಾ ಇದೆ.

    Post Views: 200

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.