Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಪೊಲೀಸರೊಂದಿಗೆ ಎಂಟ್ರಿ ಕೊಟ್ಟ ಮಾಜಿ ಪ್ರೇಯಸಿ; ಮದುವೆ ಮಂಟಪದಲ್ಲೇ ನಡೆಯಿತು ಹೈಡ್ರಾಮಾ..!
    ಇತ್ತೀಚಿನ ಸುದ್ದಿ

    ಮಂಗಳೂರು : ಪೊಲೀಸರೊಂದಿಗೆ ಎಂಟ್ರಿ ಕೊಟ್ಟ ಮಾಜಿ ಪ್ರೇಯಸಿ; ಮದುವೆ ಮಂಟಪದಲ್ಲೇ ನಡೆಯಿತು ಹೈಡ್ರಾಮಾ..!

    January 5, 2024
    Share

    ಮಂಗಳೂರು : ಮದುವೆಯ ವೇಳೆ ಮದುಮಗನ ಮಾಜಿ ಪ್ರೇಯಸಿ ಪೊಲೀಸರೊಂದಿಗೆ ಎಂಟ್ರಿ ಕೊಟ್ಟು ಹೈಡ್ರಾಮಾ ಕ್ರಿಯೆಟ್ ಮಾಡಿದ ಘಟನೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಆರೋಪಿ ಕೇರಳ ಮೂಲದ ಅಕ್ಷಯ್ ಎಂದು ಗುರುತಿಸಲಾಗಿದೆ. ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ. ಇತ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಈ ನಡುವೆ ಯುವತಿ ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ. ಇನ್ನು ಪ್ರಕರಣ ಸಂಬಂಧ ಅರೋಪಿ ಅಕ್ಷಯ್​ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರಿನ ಯುವತಿ ಜೊತೆ ಅಕ್ಷಯ್​ಗೆ ವಿವಾಹ ನಿಶ್ಚಯವಾಗಿದೆ. ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್​ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದು ಉಳ್ಳಾಲ ಪೊಲೀಸರೊಂದಿಗೆ ಆಗಮಿಸಿ ಹಾಲ್​ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ. ನಂತರ ಪೊಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ.

    Post Views: 256

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.