Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    Share

    ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ನಡೆದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ತಲಾ 7 ವರ್ಷ ಜೈಲು ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ. 

    ಹೈದರಾಬಾದ್ಪೊಲೀಸ್

    2020ರ ನವೆಂಬರ್ 16ರಂದು ಬೆಳಗ್ಗೆ ಸುಮಾರು 7 ಗಂಟೆಗೆ ಬಿಹಾರ ಮೂಲದ ಗೋವಿಂದ್ ಕುಮಾರ್ ಅವರು ಕೆಲಸಕ್ಕೆಂದು ಮನೆಯಿಂದ ಹೊರಟು ಪಣಂಬೂರು ದೀಪಕ್ ಪೆಟ್ರೋಲ್ ಬಂಕ್‌ನ ಹಿಂಭಾಗದಲ್ಲಿರುವ ಎನ್‌ಎಂಪಿಎ ಮುಖ್ಯ ಆಡಳಿತ ಕಚೇರಿಯ ಕಡೆಗೆ ತೆರಳುತ್ತಿದ್ದರು.

    ಈ ವೇಳೆ ಜಾವೀದ್ ಆಖ್ತರ್ ಅಲಿಯಾಸ್ ಅಖ್ತರ್ (28), ತಂದೆ ಸಂಶುದ್ದೀನ್, ಪೋರ್ಕೋಡಿ, ಕೆಂಜಾರು ಗ್ರಾಮ, ಮಂಗಳೂರು ಹಾಗೂ ತೋಯಿದ್ ಖಾದರ್ ಅಲಿಯಾಸ್ ತೋಯಿ (24), ತಂದೆ ಅನ್ವರ್, ಕಸಬಾ ಬೆಂಗ್ರೆ, ಮಂಗಳೂರು ಎಂಬ ಆರೋಪಿಗಳು ಸ್ಕೂಟರ್‌ನಲ್ಲಿ ಬಂದು ಗೋವಿಂದ್ ಕುಮಾರ್ ಅವರನ್ನು ಅಡ್ಡಗಟ್ಟಿ ತಡೆದಿದ್ದಾರೆ. ಬಳಿಕ ಕಬ್ಬಿಣದ ರಾಡ್ ತೋರಿಸಿ ಬೆದರಿಸಿ, ಸುಮಾರು ₹5,000 ಮೌಲ್ಯದ ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದರು.

    ಈ ಕುರಿತು ಗೋವಿಂದ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 56/2020ರಂತೆ ಭಾರತೀಯ ದಂಡ ಸಂಹಿತೆಯ ಕಲಂ 392, 397 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖೆಯನ್ನು ಪಣಂಬೂರು ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಅವರು ಕೈಗೊಂಡು, 2020ರ ನವೆಂಬರ್ 17ರಂದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳಿಂದ ಕಳವು ಮಾಡಲಾಗಿದ್ದ ಸೊತ್ತನ್ನು ವಶಪಡಿಸಿಕೊಂಡು, ಅವರನ್ನು ಜೆಎಂಎಫ್‌ಸಿ-2ನೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ತನಿಖೆ ಪೂರ್ಣಗೊಳಿಸಿದ ಬಳಿಕ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು.

    ಪ್ರಕರಣದ ವಿಚಾರಣೆ ಮೊದಲು 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಭಾಗಶಃ ನಡೆದಿದ್ದು, ಬಳಿಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)ಕ್ಕೆ ವರ್ಗಾವಣೆಯಾಯಿತು. ಎಸ್‌ಸಿ ನಂ.84/2021ರಂತೆ ವಿಚಾರಣೆ ಮುಂದುವರಿದಿತ್ತು.

    Post Views: 9

    Related Posts

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.