Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಚಾಕು ತೋರಿಸಿ ಮೆಡಿಕಲ್ ಶಾಪ್‌ನಲ್ಲಿ ಹಣ ಸುಲಿಗೆಗೈದ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಚಾಕು ತೋರಿಸಿ ಮೆಡಿಕಲ್ ಶಾಪ್‌ನಲ್ಲಿ ಹಣ ಸುಲಿಗೆಗೈದ ಆರೋಪಿ ಅರೆಸ್ಟ್

    January 3, 2025
    Share

    ಮಂಗಳೂರು: ಚಾಕು ತೋರಿಸಿ ಮೆಡಿಕಲ್ ಶಾಪ್‌ನ ಕ್ಯಾಶ್ ಡ್ರಾವರ್‌ನಲ್ಲಿದ್ದ ಹಣ ಸುಲಿಗೆಗೈದ ಆರೋಪಿಯನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೊಂದೇಲ್‌ನ ಪಟ್ರಕೋಡಿ ನಿವಾಸಿ ಸುನೀಲ್ (31) ಬಂಧಿತ ಆರೋಪಿ.

    ಡಿಸೆಂಬರ್ 28ರಂದು ಮಧ್ಯಾಹ್ನ ಮಂಗಳೂರಿನ ನಾಗುರಿ ಮೆಡಿಕಲ್ ಶಾಪ್‌ವೊಂದಕ್ಕೆ ಆರೋಪಿ ಸುನಿಲ್ ಹೋಗಿದ್ದಾನೆ. ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿದ ಈತ ಹಲ್ಲೆ ನಡೆಸಿ ಶಾಪ್‌ನ ಕ್ಯಾಶ್ ಡ್ರಾವರ್‌ನಲ್ಲಿದ್ದ 19,300ರೂ. ನಗದು ಸುಲಿಗೆ ಮಾಡಿ ಪರಾರಿಯಾಗಿದ್ದಾನೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣಕ್ಕೆ ಸಂಬಂಧಸಿದಂತೆ ಆರೋಪಿಯ ಪತ್ತೆಗೆ ತಂಡವನ್ನು ರಚಿಸಿ ತನಿಖೆ ನಡೆಸಲಾಗಿತ್ತು. ಅದರಂತೆ ಗುರುವಾರ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನಿಂದ ಕಳವು ಮಾಡಿದ 17,500ರೂ. ಹಣ, ಸುಲಿಗೆ ಮಾಡಲು ಬಳಸಿದ ಸ್ಕೂಟರ್ ಹಾಗೂ ಇತರ ಸೊತ್ತುಗಳನ್ನು ಸೇರಿಸಿ ಒಟ್ಟು 1,20,000ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿ ಕೊಂಡಿದ್ದಾರೆ.

    Post Views: 306

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.