Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚನೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚನೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

    September 19, 2025
    Share

    ಮಂಗಳೂರು: ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ.

    ಬಂಧಿತನನ್ನು ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಅಲಿ ಬಂಧನದೊಂದಿಗೆ ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸಿ ಬಂಧನಕ್ಕೊಳಗಾದವರ ಸಂಖ್ಯೆ 6ಕ್ಕೆ ಏರಿದಂತಾಗಿದೆ. ಆರೋಪಿಯನ್ನು ಗುರುಪುರದಲ್ಲಿ ಬಂಧಿಸಿದ್ದ ಪೊಲೀಸರು, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಗರದ ದಡ್ಡಲ್ ಕಾಡ್ ಎಂಬಲ್ಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ಸರಕಾರದ ಬೇರೆ ಬೇರೆ ಇಲಾಖೆಯ ಕಚೇರಿ ಮತ್ತು ನ್ಯಾಯಾಲಯಕ್ಕೆ ವಂಚಿಸುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.

    ಈ ಹಿನ್ನೆಲೆಯಲ್ಲಿ ನಗರದ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ‌ ಪೊಲೀಸರು ಮುಲ್ಕಿ ನಿವಾಸಿ ಅಬ್ದುಲ್ ರೆಹಮಾನ್ ಎಂಬಾತನನ್ನು ಸೆ.9 ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆತ ನೀಡಿದ ಮಾಹಿತಿಯಂತೆ ತೊಕ್ಕೊಟ್ಟು ಅಂಬಿಕಾ ರಸ್ತೆ ನಿವಾಸಿ ನಿಶಾಂತ್ ನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು.

    ಇದೇ ಪ್ರಕರಣಕ್ಕೆ‌ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿ ಬಂಟ್ವಾಳ ತಾಲೂಕಿನ ಪುದು ಸಜೀರ್ ರಸ್ತೆ ನಿವಾಸಿ ನಿತಿನ್ ಕುಮಾರ್, ಇಂದಿರಾನಗರ ಹಾಲಾಡಿ ಸಜಿಪ‌ಮುನ್ನೂರು ನಿವಾಸಿ ಹಸನ್ ರಿಯಾಝ್, ಕಾವೂರು ಫಳ್ನೀರ್ ನಿವಾಸಿ ಹನೀಫ್ ಎಂಬವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲೂ ಒಂದು ಪ್ರಕರಣ ದಾಖಲಾಗಿತ್ತು‌. ಈ ಸಂಬಂಧ ಸುರತ್ಕಲ್ ಪೊಲೀಸರು ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿಯನ್ನು ಬುಧವಾರ ಬಂಧಿಸಿ ನ್ಯಾಯಾಲಯಲಕ್ಕೆ ಹಾಜರು ಪಡಿಸಿದ್ದಾರೆ. ಸದ್ಯ ಈತನ ಬಂಧನದೊಂದಿಗೆ ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣದಲ್ಲಿ ಒಟ್ಟು 6ಮಂದಿ ಬಂಧನಕ್ಕೊಳಗಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Post Views: 188

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.