Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಚಿತ ವೈದ್ಯಕೀಯ ಶಿಬಿರ ನಡೆಸುತ್ತಿದ್ದ ನಕಲಿ ವೈದ್ಯ ಅರೆಸ್ಟ್‌‌..!
    ಇತ್ತೀಚಿನ ಸುದ್ದಿ

    ಉಚಿತ ವೈದ್ಯಕೀಯ ಶಿಬಿರ ನಡೆಸುತ್ತಿದ್ದ ನಕಲಿ ವೈದ್ಯ ಅರೆಸ್ಟ್‌‌..!

    October 18, 2024
    Share

    ಮಂಜೇಶ್ವರ: ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪ ಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.‌ ಬಂಧಿತ ನಕಲಿ ವೈದ್ಯನನ್ನು ಪಾಲಕ್ಕಾಡ್ ಮರ್ಣ್ಣಾಕಾಡ್ ಕಳರಿಕ್ಕಲ್ ನಿವಾಸಿ ಸಿ.ಎಂ. ಜಮಾಲುದ್ದೀನ್ (56) ಎಂದು ಗುರುತಿಸಲಾಗಿದೆ. ಇತನನ್ನು ಮಂಜೇಶ್ವರ ಎಸ್‌ಐ ಕೆ.ವಿ. ಸುಮೇಶ್‌ರಾಜ್ ಉಪ್ಪಳ ಪಚ್ಚಂಪಾರೆಯಿಂದ ಬಂಧಿಸಲಾಗಿದೆ. ಪಚ್ಲಂಪಾರೆಯಲ್ಲಿ ಫ್ರೆಂಡ್ಸ್‌ ಕ್ಲಬ್‌ನಲ್ಲಿ ಜಮಾಲುದ್ದೀನ್‌ನ ನೇತೃತ್ವದಲ್ಲಿ ಶಿಬಿರ ನಡೆಸಲಾಗಿತ್ತು. ಯಾವುದೇ ಅರ್ಹತೆಯೋ, ದಾಖಲೆ ಪತ್ರಗಳೂ ಇಲ್ಲದೆ ರೋಗಿಗಳನ್ನು ತಪಾಸಣೆ ನಡೆಸಿ ಔಷಧಿ ನೀಡಿದನೆಂಬ ಆರೋಪದಂತೆ ಈತನನ್ನು ಬಂಧಿಸಲಾಗಿದೆ. ನಕಲಿ ವೈದ್ಯ ವೈದ್ಯಕೀಯ ಶಿಬಿರ ನಡೆಸುತ್ತಿರುವ ಬಗ್ಗೆ ಜಿಲ್ಲಾ ಮೆಡಿಕಲ್ ಆಫೀಸ‌ರ್ ಕೆ. ಸಂತೋಷ್‌ರಿಗೆ ಮಾಹಿತಿ ಲಭಿಸಿತ್ತು. ಈ ಕುರಿತು ತನಿಖೆ ನಡೆಸಲು ಡೆಪ್ಯುಟಿ ಜಿಲ್ಲಾ ಮೆಡಿಕಲ್ ಆಫೀಸರ್‌ರಿಗೆ ಹೊಣೆಗಾರಿಕೆ ನೀಡಲಾಗಿದೆ. ಜಿಲ್ಲಾ ಮೆಡಿಕಲ್ ಆಫೀಸರ್ ಸ್ಥಳಕ್ಕೆ ಧಾವಿಸಿ ನಡೆಸಿದ ಪರಿಶೀಲನೆಯಲ್ಲಿ ಜಮಾಲುದ್ದೀನ್‌ಗೆ ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದಿರುವುದು ದೃಢವಾಗಿದೆ. ಅನಂತರ ಡಿಎಂಓ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಜಮಾಲುದ್ದೀನ್ ವಿರುದ್ಧ ಬೇರೆಲ್ಲಾದರೂ ಕೇಸುಗಳಿವೆಯೇ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 302

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.