Facebook Twitter Instagram
    Thursday, October 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ- 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ- 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    October 8, 2026
    Share

    ಮಂಗಳೂರು: ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿದ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ, 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

    ಬಂಧಿತನನ್ನು ಕೇರಳದ ಕಾಸರಗೋಡು ಜಿಲ್ಲೆಯ ಬೇವಿಂಜೆ ಗ್ರಾಮದ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

    2010ರ ಜೂನ್ 22ರಂದು ವೇಲಾಯುಧನ್ ಅವರು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸಿದ್ದರು. ಈ ವೇಳೆ ಬಜಪೆ ವಿಮಾನ ನಿಲ್ದಾಣದ ಇಮಿಗ್ರೇಷನ್ ಅಧಿಕಾರಿ ಕೆ.ಎಂ. ಚಂದ್ರಶೇಖರ್ ಅವರು ಅವರನ್ನು ವಶಕ್ಕೆ ಪಡೆದು ಬಜಪೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.

    ಈ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖೆ ನಡೆಸಿದ ಅಂದಿನ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಾನ್ಯ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ವೇಲಾಯುಧನ್‌ಗೆ 1 ವರ್ಷ 6 ತಿಂಗಳ ಶಿಕ್ಷೆ ವಿಧಿಸಿತ್ತು.

    ನಂತರ ಶಿಕ್ಷೆಯ ವಿರುದ್ಧ ವೇಲಾಯುಧನ್ ಅವರು ಕರ್ನಾಟಕ ಹೈಕೋರ್ಟ್‌ಗೆ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದರು. ಆದರೆ, ಮಾನ್ಯ ಹೈಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿತ್ತು.

    ಹೈಕೋರ್ಟ್ ಮನವಿ ತಿರಸ್ಕರಿಸಿದ ಬಳಿಕ ಬಂಧನಕ್ಕೆ ಸಿಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದರು. ಇದೀಗ 2026ರ ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಅವರನ್ನು ವಶಕ್ಕೆ ಪಡೆದುಕೊಂಡಿದೆ.

    ಬಳಿಕ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

    Post Views: 12

    Related Posts

    ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ 2 ಕೋಟಿ ರೂ. ವಂಚನೆ- ಪ್ರಕರಣ ದಾಖಲು

    October 8, 2026

    ಮಂಗಳೂರು ದಸರಾಗೆ ಅ.12ರಂದು ಸಿಎಂ ಚಾಲನೆ: ಅರಮನೆ ಶೈಲಿಯ ದರ್ಬಾರ್ ಮಂಟಪ, ವೈವಿಧ್ಯಮಯ ಕಾರ್ಯಕ್ರಮ

    October 8, 2026

    ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣ- ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    October 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ 2 ಕೋಟಿ ರೂ. ವಂಚನೆ- ಪ್ರಕರಣ ದಾಖಲು

    October 8, 2026

    ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ- 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    October 8, 2026

    ಮಂಗಳೂರು ದಸರಾಗೆ ಅ.12ರಂದು ಸಿಎಂ ಚಾಲನೆ: ಅರಮನೆ ಶೈಲಿಯ ದರ್ಬಾರ್ ಮಂಟಪ, ವೈವಿಧ್ಯಮಯ ಕಾರ್ಯಕ್ರಮ

    October 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.