ಬಂಟ್ವಾಳ : ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆಯು ಡಿ.17ರ ಮಂಗಳವಾರದ ಬೆಳಿಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ತುಂಬೆ ಬಳಿಯ ನೆತ್ತರಕೆರೆ ಎಂಬಲ್ಲಿ ಸಂಭವಿಸಿದೆ.
ಮೃತಪಟ್ಟಿರುವ ವ್ಯಕ್ತಿಯು ಕಡಬ ತಾಲೂಕಿನ ಗೂನಡ್ಕದ ನಿವಾಸಿಯಾಗಿರುವ ಶಶಿಕುಮಾರ್ ಎಸ್. ಎಂದು ಗುರುತಿಸಲಾಗಿದೆ.
11 ಗಂಟೆಯ ಸುಮಾರಿಗೆ ಸುಬ್ರಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಿಂದ ಕೆಳಗೆ ಬಿದ್ದು ಶಶಿಕುಮಾರ್ ಎಸ್. ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇವರು ರೈಲಿನ ಮೆಟ್ಟಿಲ ಮೇಲೆ ಕುಳಿತು ಪ್ರಯಾಣಿಸುತ್ತಿದ್ದರು, ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ಸಹಪ್ರಯಾಣಿಕರು ಮಂಗಳೂರು ರೈಲ್ವೆ ಪೋಲಿಸರಿಗೆ ತಿಳಿಸಿದ್ದಾರೆ.