Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ದ ಸುಳ್ಳು ಸಂದೇಶ – ದೂರು ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ದ ಸುಳ್ಳು ಸಂದೇಶ – ದೂರು ದಾಖಲು

    June 16, 2024
    Share

    ಮಂಗಳೂರು : ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ‌ ಸುಳ್ಳು ಸಂದೇಶ ರವಾನಿಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಉದ್ಯಮಿ, ನಳಿನ್ ಆಪ್ತ ಸೀತಾರಾಮ ರೈ ಕೆದಂಬಾಡಿಗುತ್ತು ದೂರು ನೀಡಿದ್ದಾರೆ.

    ಅಝೀಜ್ ಹಾಗೂ ಇನ್ನಿತರರು ನಳಿನ್ ಕುಮಾರ್ ಕಟೀಲು ಅವರ ವಿರುದ್ಧ ವಾಟ್ಸ್ಆ್ಯಪ್‌ನಲ್ಲಿ ತಪ್ಪು ಸಂದೇಶ ರವಾನಿಸುತ್ತಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.‌ ಮೇ 14ರಿಂದ ವಾಟ್ಸ್ಆ್ಯಪ್‌ನಲ್ಲಿ ನಿರಂತರವಾಗಿ ನಳಿನ್ ಕುಮಾರ್ ಕಟೀಲು ವಿರುದ್ಧ ಮಾನಹಾನಿಯಾಗುವಂತೆ ಸಂದೇಶವನ್ನು ಹರಿಯಬಿಡಲಾಗಿದೆ. ಅಜೀಜ್ ಎಂಬಾತ “ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಗ್ ಟ್ವಿಸ್ಟ್ – ಹಣ ನೀಡಿ ಕೊಲೆ ಮಾಡಿಸಿದ ನಳಿನ್ ಕುಮಾರ್ ಕಟೀಲು” ಎಂಬಿತ್ಯಾದಿ ಸಂದೇಶಗಳನ್ನು ರವಾನಿಸುತ್ತಿದ್ದಾನೆ. ಪ್ರಸಾದ್ ಕೆ. ಎಂಬಾತನಿಂದಲೂ ಈ ವಿಚಾರದ ಬಗ್ಗೆ ಪ್ರಚಾರವಾಗುತ್ತಿದೆ. ನಳಿನ್ ಕುಮಾರ್ ಕಟೀಲು ಅವರ ತೇಜೋವಧೆ ಮಾಡಲು ಪ್ರಯತ್ನಿಸುತ್ತಿರುವುದು ಕಂಡು ಬರುತ್ತಿದೆ. ಇದು ಅವರ ಅಭಿಮಾನಿ ಬಳಗಕ್ಕೆ ತುಂಬಾ ನೋವುಂಟಾಗಿರುತ್ತದೆ. ಈ ಬಗ್ಗೆ ತಕ್ಷಣ ಪ್ರಕರಣ ದಾಖಲಿಸಿ ಮಾನಹಾನಿಕರ ಸಂದೇಶಗಳನ್ನು ರವಾನಿಸುವವರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ದೂರಿನಲ್ಲಿ ತಿಳಿಸಲಾಗಿದೆ.

    Post Views: 212

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.