Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಾಲ್ವರ ಹತ್ಯೆ ಪ್ರಕರಣ – ಹಂತಕ ಪ್ರವೀಣ್‌ನಿಂದ ರಕ್ಷಣೆಗಾಗಿ ಕುಟುಂಬಸ್ಥರ ಮೊರೆ
    ಇತ್ತೀಚಿನ ಸುದ್ದಿ

    ಮಂಗಳೂರು: ನಾಲ್ವರ ಹತ್ಯೆ ಪ್ರಕರಣ – ಹಂತಕ ಪ್ರವೀಣ್‌ನಿಂದ ರಕ್ಷಣೆಗಾಗಿ ಕುಟುಂಬಸ್ಥರ ಮೊರೆ

    February 6, 2024
    Share

    ಮಂಗಳೂರು: 1994 ರಲ್ಲಿ ವಾಮಂಜೂರಿನಲ್ಲಿ ನಾಲ್ವರು ಸಂಬಂಧಿಕರನ್ನೇ ಹತ್ಯೆ ಮಾಡಿ ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಗೊಂಡಿರುವ ಪ್ರವೀಣ್‌ ಕುಮಾರ್‌(60)ನಿಂದ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ರಕ್ಷಣೆ ಒದಗಿಸಬೇಕು ಎಂದು ಆತನ ಕುಟುಂಬಸ್ಥರು ಪೊಲೀಸರು ಹಾಗೂ ಸರಕಾರಕ್ಕೆ ಮತ್ತೊಮ್ಮೆ ಮೊರೆ ಹೋಗಿದ್ದಾರೆ.

    ಪ್ರವೀಣ್‌ನನ್ನು ಕಳೆದ ಮೇ ತಿಂಗಳಿನಲ್ಲಿ ಸನ್ನಡತೆಯ ಕಾರಣ ನೀಡಿ ಬಿಡುಗಡೆ ಮಾಡಿರುವ ಮಾಹಿತಿ ಬಂದಿತ್ತು. ಬಳಿಕ ನ.7ರಂದು ರಾತ್ರಿ ಆತ ತಮ್ಮನಿಗೆ ಕರೆ ಮಾಡಿ ಜೀವಬೆದರಿಕೆ ಹಾಕಿದ್ದ. ಹಾಗಾಗಿ ನಾವು ಜೀವಭಯದಿಂದ ಇದ್ದೇವೆ. ಪೊಲೀಸರು ಆತನ ಚಲನವಲನಗಳನ್ನು ನಿತ್ಯವೂ ಗಮನಿಸಬೇಕು. ದ.ಕ ಜಿಲ್ಲೆಗೆ ಬರದಂತೆ ಗಡೀಪಾರು ಮಾಡಬೇಕು ಎಂದು ಕುಟುಂಬಸ್ಥರು ಮಂಗ ಳೂರು ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.ಇನ್ನು ಪ್ರವೀಣ ಬಿಡುಗಡೆಯಾಗಲಿದ್ದಾನೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ 2022ರಲ್ಲಿ ಪೊಲೀಸ್‌ ಆಯುಕ್ತರು, ಗೃಹಸಚಿವರು, ರಾಜ್ಯಪಾಲರಿಗೆ ಮನವಿ ಮಾಡಿ ಬಿಡುಗಡೆ ಮಾಡದಂತೆ ಕೇಳಿಕೊಂಡಿದ್ದೆವು. ಆತನ ಪತ್ನಿಯೂ ಬಿಡುಗಡೆ ಮಾಡದಂತೆ ಮನವಿ ಮಾಡಿದ್ದಳು. ಆದರೆ ಪ್ರಯೋಜನ ವಾಗಲಿಲ್ಲ. ಆ ಬಳಿಕ ಬಿಡುಗಡೆಯ ಸುದ್ದಿ ತಿಳಿದ ಕೂಡಲೇ ಮತ್ತೂಮ್ಮೆ ರಕ್ಷಣೆಗಾಗಿ ಮನವಿ ಮಾಡಿದ್ದೆವು ಎಂದು ಹೇಳಿದರು.ಪ್ರವೀಣ್‌ ತನ್ನ ತಮ್ಮನಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾಗಲೂ ಪೊಲೀಸರಿಗೆ ತಿಳಿಸಿದ್ದೇವೆ. ಆದರೆ ಪೊಲೀಸರಿಂದ ಸ್ಪಂದನೆ ಸಿಕ್ಕಿಲ್ಲ. ಕುಟುಂಬಸ್ಥರ ಮನೆಗೆ ಪೊಲೀಸರು ಇದುವರೆಗೂ ಭೇಟಿ ನೀಡಿಲ್ಲ. ತನ್ನ ಸಂಬಂಧಿಕರನ್ನೇ ಕೊಲೆ ಮಾಡಿದ್ದ ಆತ ಯಾವುದೇ ಕೃತ್ಯ ಮಾಡಲು ಹಿಂಜರಿಯುವವನಲ್ಲ. ದ್ವೇಷ ಸಾಧಿಸುವ ಆತಂಕವೂ ಇದೆ. ಕುಟುಂಬದಲ್ಲಿ ಹಲವರು ಹಿರಿಯ ನಾಗರಿಕರಿದ್ದಾರೆ. ಹಾಗಾಗಿ ಪೊಲೀಸರು ನಮಗೆ ರಕ್ಷಣೆ ನೀಡ ಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.ಪ್ರವೀಣ್‌ ಮೂಲತಃ ಉಪ್ಪಿನಂಗಡಿಯವ ನಾಗಿದ್ದರೂ ಹೆಚ್ಚಾಗಿ ವಾಮಂಜೂರಿ ನಲ್ಲಿ ತನ್ನ ಅತ್ತೆಯ ಮನೆಯಲ್ಲೇ ವಾಸವಾಗಿದ್ದ. ಮಂಗಳೂರಿನಲ್ಲಿ ಟೈಲರ್‌ ವೃತ್ತಿ ಮಾಡುತ್ತಿದ್ದ. 1994ರ ಫೆ.23ರ ರಾತ್ರಿ ವಾಮಂಜೂರಿನ ಮನೆಗೆ ಬಂದಿದ್ದ. ಆಗ ಕಳ್ಳರ ಹಾವಳಿ ಹೆಚ್ಚಾಗಿದ್ದ ಕಾಲ. ಮನೆಯಲ್ಲಿದ್ದ ಆತ ತಮ್ಮ ರಕ್ಷಣೆಗೆ ಇದ್ದಾನೆಂದು ಮನೆಯವರು ಭಾವಿಸಿದ್ದರು. ಆದರೆ ಕುಡಿತ, ಜೂಜಿನ ಚಟ ಹೊಂದಿದ್ದ ಪ್ರವೀಣ್‌ ಮನೆಯಲ್ಲಿದ್ದ ನಾಲ್ವರು ತನ್ನ ಸಂಬಂಧಿಕರನ್ನೇ ಕತ್ತಿಯಿಂದ ಹೊಡೆದು ಕೊಲೆ ಮಾಡಿ ಚಿನ್ನ, ಹಣ ದೋಚಿ ಪರಾರಿಯಾಗಿದ್ದ.

    Post Views: 265

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.