ಮಲ್ಪೆ: ಉಡುಪಿಯ ನೇಜಾರು ಸಮೀಪ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದ್ದು ಹಬ್ಬದ ದಿನ ಸುದ್ದಿ ಕೇಳಿ ಜನ ಬೆಚ್ಚಿ ಬಿದ್ದಿದ್ದಾರೆ.ಮನೆಗೆ ನುಗ್ಗಿ ತಾಯಿ ಹಾಗೂ ಮೂವರು ಮಕ್ಕಳನ್ನು ಹತ್ಯೆ ಮಾಡಲಾಗಿದೆ. ವಿಷಯ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮಲ್ಪೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಹಸೀನಾ 46,ಅಫ್ನಾನ್ 23,ಅಯ್ನಾಝ್ 21 ,ಆಸಿಂ 12 ಕೊಲೆಗೀಡಾದವರು. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.