Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಮದ್ಯದ ಮತ್ತಿನಲ್ಲಿ ಹಲ್ಲೆಗೈದು ಪತ್ನಿಯ ಕಣ್ಣು, ಕೆನ್ನೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿದ ಕಟುಕ ಪತಿ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮದ್ಯದ ಮತ್ತಿನಲ್ಲಿ ಹಲ್ಲೆಗೈದು ಪತ್ನಿಯ ಕಣ್ಣು, ಕೆನ್ನೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿದ ಕಟುಕ ಪತಿ

    December 19, 2023
    Share

    ಬೆಳ್ತಂಗಡಿ: ಮದ್ಯದ ಮತ್ತಿನಲ್ಲಿ ಕಟುಕ ಪತಿಯೋರ್ವನು ಪತ್ನಿಯ ಕಣ್ಣು ಕೆನ್ನೆಗೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿರುವ ರಾಕ್ಷಿಸೀ ಕೃತ್ಯವೊಂದು ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ‌. ಆರೋಪಿ ಪುತ್ರಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಶಿಶಿಲ ಬಳಿಯ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂಬಾತನೇ ಈ ರಾಕ್ಷಸಿಕೃತ್ಯ ಎಸಗಿರುವಾತ. ಪತಿ ಸುರೇಶ್ ಗೌಡ ಮಾಡಿರುವ ಈ ರಾಕ್ಷಸಿಕೃತ್ಯದಿಂದ ಪತ್ನಿಯ ಎಡ ಕಣ್ಣಿಗೆ ಸಂಪೂರ್ಣ ಹಾನಿಯಾಗಿದೆ. ಆಕೆಯ ಕಣ್ಣು ಹಾಗೂ ಕೆನ್ನೆಯ ಭಾಗಕ್ಕೆ ಕಚ್ಚಿ ಮಾಂಸವನ್ನೇ ಹೊರಗೆಡವಿದ್ದಾನೆ ಆರೋಪಿ. ಆ ಬಳಿಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆಯ ದಾಳಿಯಿಂದ ತಾಯಿಯನ್ನು ಬಿಡಿಸಲು ಬಂದ ಪುತ್ರಿಯ ತಲೆ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ‌. ಆಗ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿ ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ. ನೆರೆಹೊರೆಯವರು ಧಾವಿಸುತ್ತಿದ್ದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ಪತಿಯಿಂದ ಜೀವ ಉಳಿಸಿಕೊಳ್ಳಲು ಓಡಿ ಹೋಗಿರುವ ಪತ್ನಿ ಇಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ‌. ವಿಪರೀತವಾಗಿ ಗಾಯಗೊಂಡ ತಾಯಿ ಹಾಗೂ ಪುತ್ರಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 225

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.