Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು  
    ಇತ್ತೀಚಿನ ಸುದ್ದಿ

    ಸುರತ್ಕಲ್: ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು  

    March 17, 2024
    Share

    ಸುರತ್ಕಲ್: ಸುರತ್ಕಲ್ ನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝೀಲ್ ಅವರ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಮೂವರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

    ಪ್ರಕರಣದ ಪ್ರಮುಖ ಆರೋಪಿಗಳಾದ ಕವ್ವಳಮಡೂರು ಗ್ರಾಮ, ಬಂಟ್ವಾಳ ತಾಲೂಕು ನಿವಾಸಿ ಸುಹಾಸ್ ಶೆಟ್ಟಿ ಯಾನೆ ಸುಭಾಶ್, ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಅಭಿಷೆಕ್ ಯಾನೆ ಅಭಿ, ಕುಳಾಯಿ ನಿವಾಸಿ ಮೋಹನ್ ಸಿಂಗ್ ಯಾನೆ ನೇಪಾಲಿ ಮೋಹನ್ ಗೆ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ ಎಂದು ತಿಳಿದು ಬಂದಿದೆ.

    ಫಾಝಿಲ್ ಕೊಲೆ ಕುರಿತು ಸುರತ್ಕಲ್ ಪೊಲೀಸರು ಈ ಮೂವರನ್ನು ಎ1, ಎ2, ಮತ್ತು ಎ3 ಆರೋಪಿಗಳೆಂದು ಗುರುತಿಸಿ ಮಂಗಳೂರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

    ಪ್ರಕರಣದಲ್ಲಿ ಜಾಮಿನುಕೋರಿ ಆರೋಪಿಗಳ ಪರ ವಕೀಲರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. 

    ಈ ಹಿನ್ನೆಲೆಯಲ್ಲಿ ಈ ಮೂವರಿಗೆ ನ್ಯಾಯಾಲಯವು ಆರೋಪಿಗಳು ತಲಾ ಒಂದು ಲಕ್ಷ ರೂ. ಬಾಂಡ್  ನ್ಯಾಯಾಲಯಕ್ಕೆ ಕಟ್ಟಬೇಕು. 

    ಪ್ರಕರಣ ಕುರಿತು ಕೆಳ ನ್ಯಾಯಾಲಯದ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಬೇಕು. ಸಾಕ್ಷಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಬಾರದು ಅಥವಾ ಹಾಳು ಮಾಡಬಾರದು, ಭವಿಷ್ಯದಲ್ಲಿ ಇದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಬಾರದು, ಮೊಕದ್ದಮೆ ವಿಲೇವಾರಿಯಾಗದೆ ನ್ಯಾಯಾಲಯದ ಅನುಮತಿಯಿಲ್ಲದೆ ಊರುಬಿಡುವಂತಿಲ್ಲ.  ಎಲ್ಲಾ ಮೂವರು ಪ್ರತಿ ಭಾನುವಾರ ಸುರತ್ಕಲ್ ಪೊಲೀಸ್ ಠಾಣೆಗೆ ಹಾಜರಾಗಿ ಹಾಜರಾತಿ ಸಲ್ಲಿಸಬೇಕು ಎಂಬ ಷರತ್ತುಗಳನ್ನು ವಿಧಿಸಿ ಆದೇಶದಲ್ಲಿ ಸೂಚಿಸಿದೆ ಎಂದು ತಿಳಿದು ಬಂದಿದೆ.

    Post Views: 227

    Related Posts

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.