Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿಯಲ್ಲಿ ಚಂಡಮಾರುತದ ಭೀತಿ : ಭಾರೀ ಗಾಳಿ-ಮಳೆಯ ಮುನ್ಸೂಚನೆ- ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ..!
    ಇತ್ತೀಚಿನ ಸುದ್ದಿ

    ಕರಾವಳಿಯಲ್ಲಿ ಚಂಡಮಾರುತದ ಭೀತಿ : ಭಾರೀ ಗಾಳಿ-ಮಳೆಯ ಮುನ್ಸೂಚನೆ- ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ..!

    June 7, 2023
    Share

    ಉಡುಪಿ : ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ರಾಜ್ಯದ ಪಶ್ಚಿಮದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಗಾಳಿ ಮಳೆ ಸುರಿಯಲಿದ್ದು ಸಮುದ್ರ ಪ್ರಕ್ಷುಬ್ಧವಾಗಿರಲಿದೆ.

    ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾಮ್ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಿ ಪ್ರಕಟಣೆ ಹೊರಡಿಸಿದ್ದಾರೆ. ಚಂಡಮಾರುತದ ಚಲನೆಯ ಕಾರಣದಿಂದ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಏಳುವ ಸಂಭವವಿದ್ದು, ಭಾರೀ ಮಳೆಯೂ ಸುರಿಯುವ ಸಾಧ್ಯತೆ ಇದೆ. ಆದುದರಿಂದ ಈ ಅವಧಿಯಲ್ಲಿ ಮೀನುಗಾರರು ಮೀನುಗಾರಿಕೆ ಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಜಿಲ್ಲಾಡಳಿತದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕ ರಿಗೆ ಕೆಲವು ಸೂಚನೆಗಳನ್ನು ನೀಡಿದ್ದು, ಅದನ್ನು ಪಾಲಿಸುವಂತೆ ತಿಳಿಸಲಾಗಿದೆ. ಸಾರ್ವಜನಿಕರು, ಪ್ರವಾಸಿಗರು ಸಮುದ್ರ, ನದಿ ತೀರ ಪ್ರದೇಶಗಳಲ್ಲಿ ನೀರಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸು ವಂತೆ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ಕಂಬ, ಕಟ್ಟಡ, ಮರಗಳ ಬಳಿ, ಕೆಳಗೆ ನಿಲ್ಲದಂತೆ ಎಚ್ಚರಿಸಲಾಗಿದೆ. ನೆರೆ ಬರುವ ಸಾಧ್ಯತೆ ಇರುವ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸಿದ್ಧವಾಗಿರಬೇಕು ಎಂದು ಸೂಚಿಸಲಾಗಿದೆ. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ಎದುರಿಸಲು, ನಿಭಾಯಿಸಲು ತಯರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಗತ್ಯದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಕಂಟ್ರೋಲ್ ರೂಮ್‌ನ ದಿನದ 24 ಗಂಟೆಯೂ ಕಾರ್ಯಾ ಚರಿಸುವ ದೂರವಾಣಿ ಸಂಖ್ಯೆ: 0820-2574802 ಅಥವಾ ಟೋಲ್‌ಫ್ರಿ ನಂ. 1077ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.  

    Post Views: 226

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.