Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭ್ರೂಣ ಹತ್ಯೆ ಪ್ರಕರಣ : ಮತ್ತೋರ್ವ ಆರೋಪಿ ಅರೆಸ್ಟ್ , ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ
    ಇತ್ತೀಚಿನ ಸುದ್ದಿ

    ಭ್ರೂಣ ಹತ್ಯೆ ಪ್ರಕರಣ : ಮತ್ತೋರ್ವ ಆರೋಪಿ ಅರೆಸ್ಟ್ , ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ

    December 2, 2023
    Share

    ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.

    ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಎಂಬಾಕೆಯನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

    ಭ್ರೂಣ ಹತ್ಯೆ ಪ್ರಕರಣ ಬಯಲಾಗುತ್ತಿದ್ದಂತೆ ಈಕೆ ಕೆಲಸ ಬಿಟ್ಟಿದ್ದಳು, ತನಿಖೆ ನಡೆಸಿದ ಪೊಲೀಸರು ಮಂಜುಳಾರನ್ನು ಲಾಕ್ ಮಾಡಿದ್ದಾರೆ.

    ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೋಲೀಸರು ಭ್ರೂಣ ಹತ್ಯೆ ಪ್ರಕರಣವನ್ನು ಪತ್ತೆ ಮಾಡಿದ್ದು, ಇಬ್ಬರು ವೈದ್ಯರು ಸೇರಿ 9 ಮಂದಿಯನ್ನು ಬಂಧಿಸಿದ್ದರು. ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಇಲಾಖಾ ತನಿಖೆಯನ್ನು ಬಾಕಿ ಇರಿಸಿ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿತ್ತು. 900 ಹೆಣ್ಣುಭ್ರೂಣ ಹತ್ಯೆ ಮಾಡಿದ್ದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇದಲ್ಲದೇ ಬೆಂಗಳೂರಿನಲ್ಲಿ ಹಸುಗೂಸುಗಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಪತ್ತೆಯಾಗಿದ್ದು, ತಮಿಳುನಾಡು ಮೂಲದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    Post Views: 186

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.