Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು:ವಿದೇಶ ಪ್ರವಾಸದ ನೆಪದಲ್ಲಿ ದಂಪತಿಗೆ 1.51 ಲಕ್ಷರೂ. ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು:ವಿದೇಶ ಪ್ರವಾಸದ ನೆಪದಲ್ಲಿ ದಂಪತಿಗೆ 1.51 ಲಕ್ಷರೂ. ವಂಚನೆ

    January 29, 2025
    Share

    ಮಂಗಳೂರು: ಯೂರೋಪ್‌ನ ಜಾರ್ಜಿಯಾ ದೇಶದ ಪ್ರವಾಸ ಪ್ಯಾಕೇಜ್ ಕುರಿತ ಮಾಹಿತಿಯನ್ನು ನಂಬಿ 1.51 ಲಕ್ಷ ರೂ. ಕಳೆದುಕೊಂಡಿರುವ ಕುರಿತಂತೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರೆ ಜೆಸಿಂತಾಡಿ’ಸೋಜಾ ಅವರಿಗೆ ಕಳೆದ ಡಿಸೆಂಬರ್‌ನಲ್ಲಿ ಫೋನ್ ಕರೆಯೊಂದು ಬಂದಿದ್ದು, ಅದರಲ್ಲಿ ನಿಮಗೆ ಗಿಫ್ಟ್ ವೋಚರ್ ಬಂದಿದ್ದು, ಮಂಗಳೂರಿನ ಹಂಪನಕಟ್ಟೆಯ ಹೊಟೇಲ್ ಒಂದರಿಂದ ಕಲೆಕ್ಟ್ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ದೂರುದಾರೆ ಮತ್ತು ಅವರ ಗಂಡ ಡಿ. 14ರಂದು ಸಂಜೆ 5 ಗಂಟೆಗೆ ಹೊಟೇಲ್‌ಗೆ ಹೋಗಿದ್ದು, ಅಲ್ಲಿ ಹರ್ಬಾನ್ ಮತ್ತು ಪ್ರಿಯಾಂಕಾ ಎನ್ನುವ ಹೆಸರಿನ ಇಬ್ಬರು ‘ಡ್ರಿಮಿ ಹೆವೆನ್ಸ್ ಕ್ಲಬ್ ಪೈ.ಲಿ. ಸಿಬಂದಿ’ ಎಂದು ಪರಿಚಯಿಸಿಕೊಂಡಿದ್ದಾರೆ. ರಜಾ ಸಮಯದಲ್ಲಿ ದೇಶ-ವಿದೇಶದಲ್ಲಿ ಪ್ರವಾಸ ಪ್ಯಾಕೇಜ್ ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದ್ದರು. ಈ ವೇಳೆ ಜೆಸಿಂತಾ ಅವರು ಜಾರ್ಜಿಯಾ ಪ್ರವಾಸ ಪ್ಯಾಕೇಜ್ ಇದೆಯೇ ಎಂದು ಕೇಳಿದಾಗ ಅದಕ್ಕೂ ವ್ಯವಸ್ಥೆ ಇದೆ ಎಂದು ನಂಬಿಸಿದ್ದಾರೆ. ಅವರ ಮಾತನ್ನು ನಂಬಿದ ದಂಪತಿ ಅವರು ನೀಡಿದ ಸಂಸ್ಥೆಯ ಬ್ಯಾಂಕ್ ಖಾತೆಯ ಸ್ಕಾ ನರ್‌ಗೆ ಒಟ್ಟು 1,51,800 ರೂ. ವಿವಿಧ ಮೂಲಗಳ ಮೂಲಕ ಜಮೆ ಮಾಡಿದ್ದಾರೆ. ಮೂರು ವಾರಗಳ ಬಳಿಕ ಅವರು ನೀಡಿದ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಚಾರಿಸಿದಾಗ ಸರಿಯಾಗಿ ಸ್ಪಂದಿಸಿಲ್ಲ. ಹಣವನ್ನು ವಾಪಸು ಕೇಳಲು ಆರಂಭಿಸಿದ ಬಳಿಕ ಕರೆಯನ್ನೂ ಸ್ವೀಕರಿಸಲಿಲ್ಲ. ವಿದೇಶಕ್ಕೆ ಕಡಿಮೆ ಖರ್ಚಿನಲ್ಲಿ ಕರೆದುಕೊಂಡು ಹೋಗುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    Post Views: 119

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.