Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್
    ಕ್ರೈಂ ಸ್ಟೋರಿ

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026
    Share

    ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪಿನ ನಡುವೆ ನಡೆದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾರಿವಾಳ ಕಳ್ಳತನದ ವಿಚಾರವಾಗಿ ಉಂಟಾದ ಕಿರಿಕ್‌ನಲ್ಲಿ ಆಟೋ ಚಾಲಕ ಮಲ್ಲಿಕಾರ್ಜುನ್ (24) ಎಂಬಾತ ಕೊಲೆಯಾಗಿದ್ದಾರೆ.

    ಪಾರಿವಾಳ ಕಳ್ಳತನ, ಜಗಳ ಘಟನೆಯ ವಿವರ

    ಲಗ್ಗೆರೆಯ ನಿವಾಸಿಗಳಾದ ಶಂಕರ್ ರಾವ್ ಮತ್ತು ಅನ್ನಪೂರ್ಣ ದಂಪತಿಯ ಪುತ್ರ ಮಲ್ಲಿಕಾರ್ಜುನ್ ಕಳೆದ ಸೋಮವಾರ ರಾತ್ರಿ ಕೊಲೆಯಾದ ದುರ್ದೈವಿ. ಸೋಮವಾರ ಸಂಜೆ ಮಲ್ಲಿಕಾರ್ಜುನ್ ಸ್ನೇಹಿತ ಪ್ರಶಾಂತ್ ಎಂಬಾತ ಸಾಕಿದ್ದ ಪಾರಿವಾಳವನ್ನು ಅದೇ ಏರಿಯಾದ ಸುರೇಂದ್ರ, ದರ್ಶನ್ ಹಾಗೂ ಮಹೇಂದ್ರ ಎಂಬುವವರ ಗುಂಪು ಕಳ್ಳತನ ಮಾಡಿತ್ತು ಎನ್ನಲಾಗಿದೆ. ಈ ವಿಚಾರವಾಗಿ ಎರಡೂ ಗುಂಪುಗಳ ನಡುವೆ ಜಗಳ ಆರಂಭವಾಗಿತ್ತು.

    ಈ ವೇಳೆ ಸ್ನೇಹಿತ ಪ್ರಶಾಂತ್ ಕರೆ ಮಾಡಿದ್ದಾನೆಂದು ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಮಲ್ಲಿಕಾರ್ಜುನ್ ಧಾವಿಸಿದ್ದರು. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡ ಆರೋಪಿಗಳ ಗುಂಪು ಮಲ್ಲಿಕಾರ್ಜುನ್ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಬೆನ್ನು ಮತ್ತು ದೇಹದ ಹಲವು ಭಾಗಗಳಿಗೆ ಚಾಕುವಿನಿಂದ ಇರಿದ ಪರಿಣಾಮ ಮಲ್ಲಿಕಾರ್ಜುನ್ ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದಿದ್ದರು.

    ಆಸ್ಪತ್ರೆಯಲ್ಲಿ ಸಾವು

    ತೀವ್ರವಾಗಿ ಗಾಯಗೊಂಡಿದ್ದ ಮಲ್ಲಿಕಾರ್ಜುನ್‌ರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಮಾರು ಆರು ಬಾಟಲ್ ರಕ್ತ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕೇವಲ ಒಂದು ವಾರದ ಹಿಂದಷ್ಟೇ ಪೋಷಕರು ಮಗನಿಗೆ ಹೊಸ ಆಟೋ ಕೊಡಿಸಿದ್ದರು. ಈಗ ಮಗನ ಶವದ ಮುಂದೆ ಪೋಷಕರು ಕಣ್ಣೀರು ಹಾಕುತ್ತಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.

    ಐವರು ಆರೋಪಿಗಳ ಬಂಧನ

    ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಜಗೋಪಾಲನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸುರೇಂದ್ರ, ದರ್ಶನ್ ಮತ್ತು ಮಹೇಂದ್ರ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

    Post Views: 148

    CrimeNews karnataka

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.