Facebook Twitter Instagram
    Tuesday, October 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಬಾಲಕನಿಗೆ ಸ್ಕೂಟರ್ ಕೊಟ್ಟ ತಂದೆಗೆ 26 ಸಾವಿರ ರೂ. ದಂಡ
    ಇತ್ತೀಚಿನ ಸುದ್ದಿ

    ಬಂಟ್ವಾಳ : ಬಾಲಕನಿಗೆ ಸ್ಕೂಟರ್ ಕೊಟ್ಟ ತಂದೆಗೆ 26 ಸಾವಿರ ರೂ. ದಂಡ

    March 8, 2025
    Share

    ಬಂಟ್ವಾಳ : ಲೈಸನ್ಸ್ ಹೊಂದಿರದ, ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ಸ್ಕೂಟರ್ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಪರಿಣಾಮ, ಆತನ ತಂದೆ 26,000 ರೂಪಾಯಿ ದಂಡ ಕಟ್ಟಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

    ಎರಡು ದಿನಗಳ ಹಿಂದೆ ಬಂಟ್ವಾಳ ಸಂಚಾರ ಠಾಣಾ ಪೊಲೀಸರು ಎಸ್. ಐ. ಸುತೇಶ್ ನೇತೃತ್ವದಲ್ಲಿ ಅಲ್ಲಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಬಾಲಕನೋರ್ವ ಪರ್ಲಿಯಾ ಸಮೀಪ ಸ್ಕೂಟರ್ ಚಲಾಯಿಸಿಕೊಂಡು ಬರುತ್ತಿರುವುದು ಕಂಡುಬಂದಿದೆ. ಆಗ ಆತನನ್ನು ನಿಲ್ಲಿಸಿ ವಿಚಾರಿಸಿದಾಗ ಅಪ್ರಾಪ್ತ ವಯಸ್ಕನಾಗಿದ್ದು, ಲೈಸನ್ಸ್ ಇಲ್ಲದಿರುವುದು ಗೊತ್ತಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಬಳಿಕ ಬಾಲಕನ ತಂದೆ, ಸಮೀರ್ ಎಂಬವರಿಗೆ ಬಂಟ್ವಾಳ ಜೆಎಂಎಫ್ ಸಿ ಕೋರ್ಟಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ನಿಯಮ ಉಲ್ಲಂಘಿಸಿದ್ದಕ್ಕಾಗಿ 26 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

    ಮಕ್ಕಳ ಕೈಗೆ ಸ್ಕೂಟರ್ ಕೊಟ್ಟರೆ ಫೈನ್ ಬೀಳುವುದು ಖಚಿತ ಎಂದು ರಸ್ತೆ ಸುರಕ್ಷತಾ ಸಪ್ತಾಹ ಸಹಿತ ಹಲವು ಬಾರಿ ಪೊಲೀಸರು ಎಚ್ಚರಿಕೆ ನೀಡುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ, ಶಾಲೆ, ಕಾಲೇಜುಗಳಿಗೂ ಹೋಗಿ ಪಾಠ ಮಾಡಿ ಬರುತ್ತಾರೆ. ಆದರೆ ಹೈಸ್ಕೂಲ್ ಗೆ ಹೋಗುವ ಮಕ್ಕಳು ತ್ರಿಬಲ್​ ರೈಡಿಂಗ್​​ ಮಾಡುವುದು, ಜಾಲಿ ರೈಡ್ ಮಾಡುವ ಪ್ರಕರಣಗಳು ಕಂಡುಬರುತ್ತಿವೆ. ಈ ವೇಳೆ ಸಿಕ್ಕಿಬಿದ್ದರೆ, ಸ್ಕೂಟರ್ ನ ಆರ್. ಸಿ. ಹೊಂದಿದವರೇ ಫೈನ್ ಕಟ್ಟಬೇಕಾಗುತ್ತದೆ ಎಂಬುದಕ್ಕೆ ಈ ಪ್ರಕರಣ ಉದಾಹರಣೆಯಾಗಿದೆ ಎಂದು ಎಸ್.ಐ. ಸುತೇಶ್ ತಿಳಿಸಿದ್ದಾರೆ.

    Post Views: 364

    Related Posts

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.