Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮುದ್ರಿಸಿದಕ್ಕೆ ಕೇಸ್ ದಾಖಲು
    ಇತ್ತೀಚಿನ ಸುದ್ದಿ

    ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮುದ್ರಿಸಿದಕ್ಕೆ ಕೇಸ್ ದಾಖಲು

    April 28, 2024
    Share

    ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ ವರನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಕೇಸು ದಾಖಲಿಸಿದ್ದಾರೆ.

    ಶಿವಪ್ರಸಾದ್ ಎಂಬುವವರ ಮದುವೆ ಏಪ್ರಿಲ್ 18ರಂದು ನೆರವೇರಿದೆ. ಮಾರ್ಚ್ 1ರಂದು ಮದುವೆಯ ಆಮಂತ್ರಣ ಪತ್ರ ಮುದ್ರಿಸಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಂಡ ಚುನಾವಣಾ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ಏಪ್ರಿಲ್ 14ರಂದು ವರನ ಮನೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ.

    ಇದು ನೀತಿ ಸಂಹಿತೆ ಉಲ್ಲಂಘನೆ ಅಲ್ಲ, ಮೋದಿಯವರ ಮೇಲಿನ ಪ್ರೀತಿ ಮತ್ತು ದೇಶದ ಮೇಲಿನ ಕಾಳಜಿಯಿಂದ ಈ ರೀತಿ ಮುದ್ರಿಸಿರುವುದಾಗಿ ಶಿವಪ್ರಸಾದ್ ಲಿಖಿತ ಹೇಳಿಕೆ ನೀಡಿದ್ದಾರೆ. ಮತದಾನದ ನಂತರ ಅಧಿಕಾರಿಗಳು ಈ ಬಗ್ಗೆ ದೂರು ದಾಖಲಿಸಿದ್ದು, ಶನಿವಾರ ಆಮಂತ್ರಣ ಪತ್ರಿಕೆ ಮುದ್ರಣ ಮಾಡಿದವರನ್ನು ಕೂಡ ಕರೆಸಿ ವಿಚಾರಿಸಲಾಗಿದೆ.

    Post Views: 186

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.