Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮನೆಯ ಚಪ್ಪರದಲ್ಲಿದ್ದ ಡೆಕೋರೆಷನ್ ವಸ್ತುಗಳಿಗೆ ಬೆಂಕಿ- ಲಕ್ಷಾಂತರ ರೂ. ನಷ್ಟ
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆಯ ಚಪ್ಪರದಲ್ಲಿದ್ದ ಡೆಕೋರೆಷನ್ ವಸ್ತುಗಳಿಗೆ ಬೆಂಕಿ- ಲಕ್ಷಾಂತರ ರೂ. ನಷ್ಟ

    January 14, 2024
    Share

    ಮಂಗಳೂರು: ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಮಂಗಳೂರು ನಗರ ಹೊರವಲಯದ ಬಜಾಲ್ ಪಲ್ಲಕೆರೆಯಲ್ಲಿ ಶುಕ್ರವಾರ ನಡೆದಿದೆ.

    ಬಜಾಲ್ ಪಲ್ಲಕೆರೆ ನಿವಾಸಿ ಲಕ್ಷ್ಮೀನಾರಾಯಣ್ ಅವರು ಡೆಕೋರೇಷನ್ ವ್ಯವಹಾರ ನಡೆಸುತ್ತಿದ್ದು, ಡೆಕೋರೆಷನ್ ಗೆ ಬಳಸುವ ವಸ್ತುಗಳನ್ನು ಮನೆಯ ಮುಂಭಾಗದ ಚಪ್ಪರದಲ್ಲಿ ಇರಿಸಿದ್ದರು. ಮನೆಯಲ್ಲಿ ಲಕ್ಷ್ಮೀನಾರಾಯಣ್ ಅವರು ಇಲ್ಲದ ವೇಳೆ ರಾತ್ರಿ 11 ಗಂಟೆ ಸುಮಾರಿಗೆ ಮನೆಗೆ ಬೆಂಕಿ ತಗುಲಿದೆ. ಈ ವೇಳೆ ಮನೆಯಲ್ಲಿ ಅವರ ಪತ್ನಿ ಮಾತ್ರ ಇದ್ದು, ಅವರು ನೋಡುವಷ್ಟರಲ್ಲಿ ಮನೆಯ ಮುಂಭಾಗ ಹಾಗೂ ಅಲ್ಲಿ ಇರಿಸಿದ್ದ ವಸ್ತುಗಳಿಗೆ ಬೆಂಕಿ ತಗುಲಿತ್ತು.

    ಲಕ್ಷ್ಮೀನಾರಾಯಣ್ ಅವರ ಪತ್ನಿ ಬೊಬ್ಬೆ ಹಾಕುತ್ತಿದ್ದಂತೆ ಅಕ್ಕ-ಪಕ್ಕದ ಮನೆಯವರು ಮನೆಯಲ್ಲಿದ್ದವರನ್ನು ರಕ್ಷಿಸಿದ್ದಾರೆ. ಬಳಿಕ ಸ್ಥಳೀಯರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಪೀಠೋಪಕರಣಗಳು, ಅಲಂಕಾರಿಕ ವಸ್ತುಗಳ ಸೇರಿ ಸುಮಾರು 18ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ ಆಗಿದೆ ಎಂದು ತಿಳಿದುಬಂದಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ.

    ಇನ್ನು ಘಟನಾ ಸ್ಥಳಕ್ಕೆ ಶಾಸಕ ವೇದವ್ಯಾಸ್ ಕಾಮತ್, ಕಾರ್ಪೊರೇಟರ್ ಅಶ್ರಫ್, ಸಂದೀಪ್, ಯುವವಾಹಿನಿ ಜಿಲ್ಲಾಧ್ಯಕ್ಷ ಹರೀಶ್ ಪೂಜಾರಿ, ಕಂಕನಾಡಿ ಗರೋಡಿ ಬಿಲ್ಲವ ಸಮಾಜ ಅಧ್ಯಕ್ಷ ದಿನೇಶ್ ಅಂಚನ್, ಎಪಿಎಂಸಿ ಮಾಜಿ ಸದಸ್ಯ ಭರತೇಶ್ ಅಮೀನ್ ಭೇಟಿ ನೀಡಿ ನೆರವು ದೊರಕಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.

    Post Views: 174

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.